ವಿ ಜಿ ಕಾಲೇಜಿಗೆ ದ್ವಿತೀಯ ಸ್ಥಾನ
ವಿ ಜಿ ಕಾಲೇಜಿಗೆ ದ್ವಿತೀಯ ಸ್ಥಾನ
ಕಲಬುರಗಿ: ಕನ್ನಡ ಸಾಹಿತ್ಯ ಚರಿತೆಯ ರನ್ನನ ನಾಡಾದ ಮುಧೋಳನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿರುವ ೨೦ನೆಯ ಶಕ್ತಿ ಸಂಭ್ರಮ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವನದಲ್ಲಿ ಜರುಗಿದ ಮೆರವಣಿಗೆಯಲ್ಲಿ ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿನಿಯರು ಇಂದು ಜರುಗಿದ ಮೆರವಣಿಗೆಯಲ್ಲಿ ಭಾಗವಹಿಸಿ ವಿಶ್ವವಿದ್ಯಾಲಯ ಮಟ್ಟದ ಮೆರವಣಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದರು.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶಶಿಲ್ ಜಿ. ನಮೋಶಿ, ಉಪಾಧ್ಯಕ್ಷರಾದ ರಾಜಾ ಬಿ. ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಶ್ ಪಾಟೀಲ್, ಮಹಾವಿದ್ಯಾಲಯದ ಸಂಚಾಲಕರಾದ ನಾಗಣ್ಣ ಘಂಟಿ, ಸದಸ್ಯರಾದ ಅನಿಲಕುಮಾರ ಮರಗೋಳ, ಅರುಣ ಕುಮಾರ ಪಾಟೀಲ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಹರ್ಷ ವ್ಯಕ್ತಪಡಿಸಿದರು.
