ಅನುಚ್ಛೇದ 171(3) ತಿದ್ದುಪಡಿ ಹೋರಾಟ ಸಮಿತಿ – ಕಲ್ಯಾಣ ಕರ್ನಾಟಕ ವಿಭಾಗಕ್ಕೆ ವಿನೋದ್ ಕುಮಾರ್ ಎಸ್. ಜೆನವೇರಿ ಅಧ್ಯಕ್ಷರಾಗಿ ಆಯ್ಕೆ

ಅನುಚ್ಛೇದ 171(3) ತಿದ್ದುಪಡಿ ಹೋರಾಟ ಸಮಿತಿ – ಕಲ್ಯಾಣ ಕರ್ನಾಟಕ ವಿಭಾಗಕ್ಕೆ ವಿನೋದ್ ಕುಮಾರ್ ಎಸ್. ಜೆನವೇರಿ ಅಧ್ಯಕ್ಷರಾಗಿ ಆಯ್ಕೆ

ಅನುಚ್ಛೇದ 171(3) ತಿದ್ದುಪಡಿ ಹೋರಾಟ ಸಮಿತಿ – ಕಲ್ಯಾಣ ಕರ್ನಾಟಕ ವಿಭಾಗಕ್ಕೆ ವಿನೋದ್ ಕುಮಾರ್ ಎಸ್. ಜೆನವೇರಿ ಅಧ್ಯಕ್ಷರಾಗಿ ಆಯ್ಕೆ

ಕಲಬುರಗಿ: ನ್ಯಾಯವಾದಿ ಶ್ರೀಯುತ ವಿನೋದ್ ಕುಮಾರ್ ಎಸ್. ಜೆನವೇರಿ ಅವರನ್ನು “ಅನುಚ್ಛೇದ 171(3) ತಿದ್ದುಪಡಿ ಹೋರಾಟ ಸಮಿತಿ – ಕರ್ನಾಟಕ” ಇದರ ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಈ ಕುರಿತು ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಭಾಸ್ಕರ ಎಂ. ಮುದೇನೂರು ಅವರು ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದು, ವಿನೋದ್ ಕುಮಾರ್ ಎಸ್. ಜೆನವೇರಿ ಅವರು ಅನುಚ್ಛೇದ 171(3) ತಿದ್ದುಪಡಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ  ಎಂದು ತಿಳಿಸಿದರು.

ರಾಜ್ಯಾಧ್ಯಕ್ಷರು ಮಾತನಾಡಿ, ಭಾರತದ ಸಂವಿಧಾನದ ಮೂಲ ಆಶಯಗಳನ್ನು ಕಾಪಾಡುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವುದು ಈ ಹೋರಾಟದ ಪ್ರಧಾನ ಉದ್ದೇಶವಾಗಿದೆ ಎಂದರು. ವಿಧಾನ ಪರಿಷತ್ತು ಚಿಂತಕರ ಛಾವಡಿಯಾಗಿದ್ದರೂ, ನಮ್ಮ ವ್ಯವಸ್ಥೆಯ ಅತಿದೊಡ್ಡ ಸಮೂಹಗಳಾದ ಪದವೀಧರರು, ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಕೃಷಿಕರು, ವೈದ್ಯರು, ನ್ಯಾಯವಾದಿಗಳು, ಮಾಧ್ಯಮ ಪ್ರತಿನಿಧಿಗಳು, ಕ್ರೀಡಾಪಟುಗಳು ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಸಮರ್ಪಕ ಪ್ರತಿನಿಧಿತ್ವ ದೊರಕುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಅನುಚ್ಛೇದ 171(3) ಸಂಪೂರ್ಣವಾಗಿ ಅವೈಜ್ಞಾನಿಕವಾಗಿದ್ದು ತಿದ್ದುಪಡಿಯ ಅಗತ್ಯವಿದೆ ಎಂದು ಹೇಳಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೊಡ್ಡ ಸಮೂಹಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಹೊಂದಬೇಕೆಂಬ ಉದ್ದೇಶದಿಂದ ಜಾಗೃತಿ ಹಾಗೂ ಹೋರಾಟವನ್ನು ರಾಜ್ಯಾದ್ಯಂತ ರೂಪಿಸಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಈ ಹೋರಾಟವನ್ನು ಸಂಘಟಿತವಾಗಿ ಮುನ್ನಡೆಸುವ ಹೊಣೆಗಾರಿಕೆಯನ್ನು ವಿನೋದ್ ಕುಮಾರ್ ಎಸ್. ಜೆನವೇರಿ ಅವರು ಯಶಸ್ವಿಯಾಗಿ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ರಾಜ್ಯಾಧ್ಯಕ್ಷರು ವ್ಯಕ್ತಪಡಿಸಿದರು.

-