ಬೆನಕನಹಳ್ಳಿ ಗ್ರಾಮದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಅದ್ದೂರಿ ಸ್ವಾಗತ
ಬೆನಕನಹಳ್ಳಿ ಗ್ರಾಮದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಅದ್ದೂರಿ ಸ್ವಾಗತ
ಸೇಡಂ ಮತಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು, ಅಭಿಮಾನಿಗಳು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲರನ್ನು ಅದ್ದೂರಿಯಾಗಿ ಗ್ರಾಮಕ್ಕೆ ಸ್ವಾಗತಿಸಿಕೊಂಡರು.
ಗ್ರಾಮದ ಅಭಿವೃದ್ಧಿಗೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಬಗ್ಗೆ ಹಾಗೂ ಇನ್ನು ಆಗಬೇಕಾದ ಯಾದಿಯನ್ನು ಗ್ರಾಮಸ್ಥರಿಂದ ಪಡೆದುಕೊಂಡು ಉಳಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ಶೀಘ್ರದಲ್ಲೇ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೂಚನೆ ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ, ಸಾರ್ವಜನಿಕರ ವಿವಿಧ ಮನವಿಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಕೆಲವನ್ನು ಸ್ಥಳದಲ್ಲಿಯೇ ಸಚಿವರು ಪರಿಹರಿಸಿದರು.
ಬೆನಕನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
