ಸರ್ಕಾರಿ ಶಾಲೆಗಳಿಗೆ ಶಾಸಕ ಪ್ರಭು ಚವ್ಹಾಣ ಭೇಟಿ, ಪರಿಶೀಲನೆ ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗದಿರಲಿ: ಅಧಿಕಾರಿಗಳಿಗೆ ಸೂಚನೆ

ಸರ್ಕಾರಿ ಶಾಲೆಗಳಿಗೆ ಶಾಸಕ ಪ್ರಭು ಚವ್ಹಾಣ ಭೇಟಿ, ಪರಿಶೀಲನೆ  ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗದಿರಲಿ: ಅಧಿಕಾರಿಗಳಿಗೆ ಸೂಚನೆ

ಸರ್ಕಾರಿ ಶಾಲೆಗಳಿಗೆ ಶಾಸಕ ಪ್ರಭು ಚವ್ಹಾಣ ಭೇಟಿ, ಪರಿಶೀಲನೆ

ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗದಿರಲಿ: ಅಧಿಕಾರಿಗಳಿಗೆ ಸೂಚನೆ

ಕಮಲನಗರ: ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಗ್ರಾಮ ಸಂಚಾರದ ನಿಮಿತ್ತ ಜ.20ರಂದು ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಯನ್ನು ಗಮನಿಸಿದರು.

ತಪಸ್ಯಾಳ, ಚಾಂದೋರಿ, ಲಕ್ಷ್ಮೀ ನಗರ ಹಾಗೂ ಮತ್ತಿತರೆ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಮತ್ತು ಮಕ್ಕಳ ಹಾಜರಾತಿ, ಮಕ್ಕಳ ದಾಖಲಾತಿ, ವಿದ್ಯಾರ್ಥಿಗಳಿಗೆ ಅನುಗುಣ ಶಿಕ್ಷಕರ ನಿಯೋಜನೆ, ಕುಡಿಯುವ ನೀರು, ಶೌಚಾಲಯ, ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತçಗಳು ಮಕ್ಕಳಿಗೆ ಸಮರ್ಪಕವಾಗಿ ಒದಗಿಸಲಾಗುತ್ತಿದೆಯೇ ಎನ್ನುವ ಬಗ್ಗೆ ಮಾಹಿತಿ ಪಡೆದರು.

ಲಕ್ಷ್ಮೀನಗರ ಶಾಲೆಯಲ್ಲಿ ಊಟಕ್ಕೆ ಕುಳಿತಿದ್ದ ಮಕ್ಕಳ ಬಳಿಗೆ ತೆರಳಿ ಆಹಾರದ ಗುಣಮಟ್ಟವನ್ನು ವೀಕ್ಷಿಸಿದರು. ಊಟ ಹೇಗಿದೆ ?, ಪ್ರತಿದಿನ ಅಡುಗೆ ಸರಿಯಾಗಿ ಮಾಡುತ್ತಾರೆಯೇ ? ಎಂದು ಮಕ್ಕಳನ್ನು ಪ್ರಶ್ನಿಸುವ ಮೂಲಕ ಆಹಾರದ ಗುಣಮಟ್ಟದ ಬಗ್ಗೆ ತಿಳಿದುಕೊಂಡರು. ಕೆಲವು ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಳಪೆ ಮಟ್ಟದ ಆಹಾರ ಪದಾರ್ಥಗಳಿರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳು ಎಲ್ಲಿಯೂ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳಿಗೆ ನೀಡುವ ಆಹಾರ ಚನ್ನಾಗಿರಬೇಕು. ಬಿಸಿಯೂಟಕ್ಕೆ ಬಳಸುವ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ಶಾಲೆಗೆ ಬರುವ ಆಹಾರಧಾನ್ಯಗಳನ್ನು ಮುಖ್ಯಗುರುಗಳು ಪರಿಶೀಲಿಸಿಯೇ ಪಡೆಯಬೇಕು. ಅವಧಿ ಮುಗಿದ ಮತ್ತು ಬಳಕೆಗೆ ಯೋಗ್ಯವಿಲ್ಲದ್ದ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಮಕ್ಕಳಿಗೆ ಕೊಡಬಾರದು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವಂತಿಲ್ಲವೆಂದು ತಿಳಿಸಿದರು.

ಎಲ್ಲ ಶಾಲೆಗಳಿಗೆ ಉತ್ತಮ ಕಟ್ಟಡ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಶುದ್ಧ ಕುಡಿಯುವ ನೀರು, ಶೌಚಾಲಯ, ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಎಲ್ಲಾ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಶೌಚಾಲಯ, ಆಟದ ಮೈದಾನ, ಕಂಪೌಂಡ್ ಇಲ್ಲದ ಶಾಲೆಗಳನ್ನು ಗುರುತಿಸಿ ಒದಗಿಸಲು ಕ್ರಮ ವಹಿಸಬೇಕೆಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಆಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಣ ಕ್ಷೇತ್ರದ ಸುಧಾರಣೆಯಾದರೆ ಎಲ್ಲ ರಂಗಗಳ ಬೆಳವಣಿಗೆ ಸಾಧ್ಯವೆಂದು ನಂಬಿರುವ ನಾನು ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದೇನೆ. ಶಾಲೆಗಳಿಗಾಗಿ ಏನೇನು ಬೇಕೋ ಎಲ್ಲವನ್ನು ಒದಗಿಸಲು ಸಿದ್ಧ. ಆದರೆ ಮಕ್ಕಳಿಗೆ ಸರಿಯಾದ ಶಿಕ್ಷಣ ಕೊಡಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು. ಈ ದಿಶೆಯಲ್ಲಿ ಮುಖ್ಯಗುರುಗಳು ಮತ್ತು ಶಿಕ್ಷಕರು ಹೆಚ್ಚಿನ ಆದ್ಯತೆ ಕೊಡಬೇಕು. ಇಲ್ಲವಾದಲ್ಲಿ ಶಿಕ್ಷಕರನ್ನು ಬೇರೆಡೆಗೆ ವರ್ಗಾಯಿಸಲಾಗುತ್ತದೆ ಎಂದು ಎಚ್ಚರಿಸಿದರು.

ನಂತರ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದರು.

ಗ್ರಾಮಕ್ಕೆ ಶಾಲೆ ಬೇಕೆಂದು ಮನವಿ ಸಲ್ಲಿಸಲಾಗುತ್ತದೆ. ಆದರೆ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಹಿಂದೇಟು ಹಾಕಲಾಗುತ್ತಿದೆ. ಪರಿಣಾಮ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಬಹಳಷ್ಟು ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಶಾಲೆಗಳ ಅಭಿವೃದ್ಧಿಗೆ ಬೇಕಾದಷ್ಟು ಅನುದಾನ ಕೊಡುತ್ತೇನೆ. ಶಿಕ್ಷಕರ ಕೊರತೆ ಸೇರಿದಂತೆ ಯಾವುದೇ ರೀತಿಯ ಸಮಸ್ಯೆಯಿದ್ದರೂ ನನ್ನ ಗಮನಕ್ಕೆ ತಂದರೆ ಸರಿಪಡಿಸುತ್ತೇನೆ. ಆದರೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಲಿ ಎಂದು ಶಾಸಕರು ಕೋರಿದರು.

ತಪಸ್ಯಾಳ, ಚಾಂದೋರಿ, ಬೇಡಕುಂದಾ, ಲಕ್ಷ್ಮೀನಗರ, ಹಿಪ್ಪಳಗಾಂವ, ರಕ್ಷ್ಯಾಳ (ಬಿ), ರಕ್ಷ್ಯಾಳ(ಕೆ), ನಿಟ್ಟೂರ(ಕೆ) ಮತ್ತು ಹೆಡಗಾಪೂರನಲ್ಲಿ ಗ್ರಾಮ ಸಂಚಾರ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರರಾದ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ ಕೌಟಗೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಲೋಕೋಪಯೋಗಿ ಉಲಾಖೆ ಎಇಇ ಪ್ರೇಮಸಾಗರ, ಪಂಚಾಯತ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಸುನೀಲ ಚಿಲ್ಲರ್ಗೆ, ಬಿಇಓ ಬಿ.ಜೆ ರಂಗೇಶ, ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ, ಸಿಡಿಪಿಓ ಇಮಲಪ್ಪ, ಎಡಿಎಲ್ಆರ್ ರಾಜಶ್ರೀ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಅರಹಂತ ಸಾವಳೆ, ಧನರಾಜ ವಡೆಯರ್, ಗಿರೀಶ ವಡೆಯರ್, ಮಂಜು ಸ್ವಾಮಿ, ಬಾಲಾಜಿ ಠಾಕೂರ, ಸಂದೀಪ ಪಾಟೀಲ, ಶಿವಕುಮಾರ ಬಿರಾದಾರ, ಉದಯ ಸೋಲಾಪೂರೆ, ಪ್ರವೀಣ ಕಾರಬಾರಿ, ರಾಜಪ್ಪ ಸೋರಾಳೆ ಹಾಗೂ ಇತರರಿದ್ದರು.