ಸಚಿವರ ಮೇಲೆ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
ಸಚಿವರ ಮೇಲೆ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
ಕಲಬುರಗಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ದಲಿತ ನಾಯಕರಾಗಿರುವ ಕಾರಣಕ್ಕಾಗಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಅವರ ವಿರುದ್ಧದ ದೂರನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಸ್ವಾಭಿಮಾನಿ ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮಾಕಾಂತ ವಿ.ಪೂಜಾರಿ, ಹಿರಿಯ ದಲಿತ ಮುಖಂಡ ನಾಗಪ್ಪ ಟೈಗರ್, ಸತೀಶ ರಾಠೋಡ್, ಸಚಿನ್ ರಿಲ್ಡನ್, ಪ್ರಕಾಶ ಜಮಾದಾರ, ಮಲ್ಲು ಆಲಗೂಡ, ಮನೋಜ ನಾಟಿಕಾರ, ಕೃಷ್ಣ ಮಂಡಳಿ, ಶಿವು ಯಾದವ, ಶಿವರಾಜ ಭಾವೆ ಸೇರಿದಂತೆ ಮತ್ತಿರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
.
