ಕ್ಲೆ ಮಾಡೆಲಿಂಗನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
ಕ್ಲೆ ಮಾಡೆಲಿಂಗನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
ಶಹಾಪುರ : ಯಾದಗಿರಿಯಲ್ಲಿ ಜರುಗಿದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲೂಕಿನ ಸಗರ ಗ್ರಾಮದ ಕಾವೇರಿ ವಿದ್ಯಾ ಮಂದಿರದ 8ನೇ ತರಗತಿ ವಿದ್ಯಾರ್ಥಿ ವಿಶ್ವ ತಂದೆ ಸೌರಪ್ಪ ಕ್ಲೆ ಮಾಡಲಿಂಗನಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಯಾದಗಿರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಅಜೀಮ್ ಪ್ರೇಮ್ ಜಿ ಶಿಕ್ಷಣ ಸಂಸ್ಥೆ ವಡಿಗೇರ ಕ್ರಾಸ್ ನಲ್ಲಿ ಜರುಗಿದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಗಳಿಸಿದ್ದಾನೆ.
ಈ ವಿದ್ಯಾರ್ಥಿ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ: ದೇವೇಂದ್ರಪ್ಪ ಹಡಪದ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿ ಮುಂದಿನ ಯಶಸ್ವಿಯ ಹಾದಿ ಸುಗಮವಾಗಿರಲಿ ಎಂದು ಶುಭ ಹಾರೈಸಿದ್ದಾರೆ.
