ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಸಮಿತಿ–2026 ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಸಮಿತಿ–2026 ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಕಲಬುರಗಿಯಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಡಾ. ಶರಣಕುಮಾರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಸಮಿತಿ–2026ರ ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಅತ್ಯಂತ ಒಮ್ಮತದಿಂದ ಆಯ್ಕೆ ಮಾಡಲಾಯಿತು.
ಸಮಿತಿಯ ಗೌರವ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರು ಹಾಗೂ ರಾಯಚೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಡಾ. ಶರಣ ಪ್ರಕಾಶ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಬಸವರಾಜ ಮಠಪತಿ (ಕಮಲಾಪೂರ), ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಸಾಲಿಮಠ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಹಿರೇಮಠ ಅವರನ್ನು ನೇಮಿಸಲಾಯಿತು.
ಬರುವ ಮಾರ್ಚ್ 1ರಂದು ಜರುಗಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿಶೇಷ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭವ್ಯ ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಮಾನ್ಯ ಶ್ರೀ ಚಂದು ಪಾಟೀಲ, ವೀರಶೈವ–ಲಿಂಗಾಯತ ಸಮಾಜದ ಮುಖಂಡರಾದ ಶ್ರೀ ಡಾ. ಕಿರಣ ದೇಶಮುಖ, ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ನಾಗಲಿಂಗಯ್ಯ ಮಠಪತಿ, ಖಜಾಂಚಿ ಚನ್ನಪ್ಪ ದಿಗ್ಗಾಂವಿ, ಪ್ರಮುಖರಾದ ರುದ್ರಮುನಿ ಮಠಪತಿ (ಕೊಂಚೂರು), ಮೃತ್ಯುಂಜಯ ಪಲ್ಲಾಪೂರಮಠ,ಅಣವೀರ ಪಾಟೀಲ (ಕಾಳಗಿ),ಚನ್ನವೀರ ಹಿರೇಮಠ,ಆನಂದ ಲೇಂಗಟಿ,ಗಂಗಾಧರ ಹಿರೇಮಠ,ಭಾಗಣ್ಣ ಸ್ವಾಧಿ,ವಿ.ಆರ್. ಸ್ವಾಮಿ,ಗುರುನಂಜಯ್ಯ ವೀರಣ್ಣಗುಡಿ,ಮಂಜುನಾಥ ಹಿರೇಮಠ,ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
