ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವ ಅಧಿಕಾರಿಗಳನ್ನು ಬಂಧಿಸಲು ಆಗ್ರಹ

ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವ ಅಧಿಕಾರಿಗಳನ್ನು ಬಂಧಿಸಲು ಆಗ್ರಹ

ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವ ಅಧಿಕಾರಿಗಳನ್ನು ಬಂಧಿಸಲು ಆಗ್ರಹ

ಬಾಗಲಕೋಟೆ : ಪರಿಶಿಷ್ಠ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು ಹಾಗೂ ಪಡೆದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಬಾಗಲಕೋಟೆಯಲ್ಲಿ ಇಂದಿನಿಂದ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಹಗಲು-ರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿವೆ. ಬಾಗಲಕೊಟೆಯ ನವನಗರದ ಜಿಲ್ಲಾಡಳಿತ ಭವನದ ಮುಂದೆ ಧರಣಿ ಸತ್ಯಾಗ್ರಹ ಆರಂಭಿಸಿರುವ ಪರಿಶಿಷ್ಠ ಪಂಗಡದ ಬಾಂಧವರು ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನ ವ್ಯಕ್ತಪಡಿಸಿದರು.ನವನಗರದ ಜಿಲ್ಲಾಡಳಿತಭವನದ ವೃತ್ತದ ಮುಂದೆ ರಸ್ತೆ ತಡೆ ನಡೆಸಿ ಟಯರ್'ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.ಇದೇ ವೇಳೆ ಮಾತನಾಡಿರುವ ಸಮಾಜದ ಮುಖಂಡರಾದ ರಾಜು ನಾಯ್ಕರ್ ಹಾಗೂ ದ್ಯಾಮಣ್ಣ ಗಾಳಿ ಅವರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಐದುವರೆ ಸಾವಿರಕ್ಕೂ ಅಧಿಕ ಜನರು ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ,ನಕಲಿ ಜಾತಿ ಪ್ರಮಾಣಪತ್ರ ನೀಡಿದವರು ಹಾಗೂ ಪಡೆದವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.ನ್ಯಾಯ ಸಿಗದೇ ಇದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಪರಿಶಿಷ್ಠ ಪಂಗಡದ ಬಾಂಧವರು ಭಾಗಿಯಾಗಿದ್ದರು.