ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ, ನರೇಗಾ ಉಳಿಸಲು ಆಗ್ರಹಿಸಿ
ಕಲಬುರಗಿ: ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ, ನರೇಗಾ ಉಳಿಸಲು ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಮುಷ್ಕರದ ಅಂಗವಾಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಡೆದ ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಕೆ.ನೀಲಾ, ಡಾ.ಮೀನಾಕ್ಷಿ ಬಾಳಿ, ಶರಣಬಸಪ್ಪ ಮಮಶೆಟ್ಟಿ, ಎಂ.ಬಿ.ಸಜ್ಜನ್, ಮೇಘರಾಜ ಕಠಾರೆ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
