ಕಂಗನಕೋಟ್: ಸಿದ್ದೇಶ್ವರ ಜಾತ್ರಾ ಮಹೋತ್ಸವ

ಕಂಗನಕೋಟ್: ಸಿದ್ದೇಶ್ವರ ಜಾತ್ರಾ ಮಹೋತ್ಸವ

ಕಂಗನಕೋಟ್: ಸಿದ್ದೇಶ್ವರ ಜಾತ್ರಾ ಮಹೋತ್ಸವ

ಬೀದರ ತಾಲೂಕಿನ ಕಂಗನಕೋಟ್ ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ೧೫, ೧೬, ಮತ್ತು ೧೭ ರಂದು ಮೂರು ದಿನಗಳ ಕಾಲ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಬಹಳ ವೈಭವಪೂರ್ಣವಾಗಿ ಜರುಗಲಿದೆ ಎಂದು ಶ್ರೀ ಸಿದ್ದೇಶ್ವರ ದೇವಾಲಯದ ಟ್ರಸ್ಟ್ ನ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ಫೆಬ್ರುವರಿ ೧೫ರಂದು ಸಾಯಂಕಾಲ ಸಾಮೂಹಿಕ ಇಷ್ಟಲಿಂಗ ಪೂಜೆ ಕೋಲಾಟ ಮತ್ತು ಕಂಗನಕೋಟ್ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಹಾಗು ಫೆಬ್ರವರಿ ೧೬ ಮತ್ತು ೧೭ ರಂದು ಸಾಯಂಕಾಲ ೪ ಗಂಟೆಗೆ ಪೂಜ್ಯ ಶ್ರೀ ಗಣೇಶಾನಂದ ಮಹಾರಾಜರ ಸಾನಿಧ್ಯದಲ್ಲಿ ಪ್ರವಚನ , ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಮಹನೀಯರಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಗಣ್ಯರು ಆಗಮಿಸಿತಿದ್ದು ಎಲ್ಲ ಸದ್ಭಕ್ತರು ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶ್ರೀ ಸಿದ್ದೇಶ್ವರ ದೇವಾಲಯದ ಟ್ರಸ್ಟ್ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.