ಸಿದ್ದು ಹಿರೋಳಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ

ಸಿದ್ದು ಹಿರೋಳಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ

ಸಿದ್ದು ಹಿರೋಳಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ

ಆಳಂದ: ತಾಲೂಕಿನ ರೈತರ ಹಕ್ಕುಗಳಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಬಿಜೆಪಿಯ ಯುವ ಮುಖಂಡ ಸಿದ್ದು ಹಿರೋಳಿ ಅವರನ್ನು ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಅಧಿಕೃತ ಆದೇಶವನ್ನು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಮಾಲಿಪಾಟೀಲ ಪ್ರಕಟಿಸಿದ್ದಾರೆ. ಸಿದ್ದು ಹಿರೋಳಿ ಅವರು ಹಲವು ವರ್ಷಗಳಿಂದ ರೈತಪರ ಹೋರಾಟಗಳು, ಸಂಘಟನೆ ಚಟುವಟಿಕೆಗಳು ಮತ್ತು ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರೈತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುತ್ತಿದ್ದಾರೆ.

ಅವರ ನೇಮಕಾತಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದ ರೈತರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ರೈತರ ಹಕ್ಕುಗಳ ಪರ ಹೋರಾಟವನ್ನು ಮತ್ತಷ್ಟು ಬಲಪಡಿಸಿ, ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಸಿದ್ದು ಹಿರೋಳಿ ಅವರ ನೇಮಕಾತಿ ಗ್ರಾಮಾಂತರ ಪ್ರದೇಶದ ರೈತ ಸಂಘಟನೆಗೆ ಹೊಸ ಉತ್ಸಾಹ ತುಂಬಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವರದಿ: ಡಾ. ಅವಿನಾಶ್ ಎಸ್. ದೇವನೂರ