ಪೋಲಿಸ್ ಇಲಾಖೆಯಿಂದ ಜನಜಾಗೃತಿ ಕಾರ್ಯಕ್ರಮ

ಪೋಲಿಸ್ ಇಲಾಖೆಯಿಂದ ಜನಜಾಗೃತಿ ಕಾರ್ಯಕ್ರಮ

ಪೋಲಿಸ್ ಇಲಾಖೆಯಿಂದ ಜನಜಾಗೃತಿ ಕಾರ್ಯಕ್ರಮ

ಗದಗ ಜಿಲ್ಲೆಯ ನರೇಗಲ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜೋರಾಗಿ ಟೇಪ್ ರೆಕಾರ್ಡ್ ಹಾಕುವ ಕುರಿತು ಜಾಗೃತಿ ಮೂಡಿಸಲಾಗಿದೆ.

ನರೇಗಲ್ ಪಟ್ಟಣದ ನರೇಗಲ್ ಪೊಲೀಸ್ ಠಾಣೆ ಯಲ್ಲಿ ಪಿಎಸ್‌ಐ ಐಶ್ವರ್ಯ ನಾಗರಾಳ ಅವರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಶಾಂತಿ ಕಾಪಾಡುವ ಬಗ್ಗೆ ಸೂಚನೆ ನೀಡಲಾಯಿತು. ಟ್ರ್ಯಾಕ್ಟರ್‌ಗಳಲ್ಲಿ ಟೇಪ್ ರೆಕಾರ್ಡ್ ಹಾಕಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವುದರಿಂದ ಹೃದಯ ರೋಗಿಗಳಿಗೆ, ಸಣ್ಣ ಮಕ್ಕಳಿಗೆ ಹಾಗೂ ಶಾಲೆ?ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತದೆ. ಆದ್ದ-ರಿಂದ ಇಂತಹ ಶಬ್ದ ಮಾಲಿನ್ಯಕ್ಕೆ ಕಾರಣವಾಗಬಾರದು ಎಂದು ಪಿಎಸ್‌ಐ ಐಶ್ವರ್ಯ ನಾಗರಾಳ ಟ್ರ್ಯಾಕ್ಟರ್ ಚಾಲಕ-ರಿಗೆ ಕಾನೂನುಗಳ ಬಗ್ಗೆ ತಿಳಿಸಿ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಮಲ್ಲಪ್ಪ ಮಾಟರಂಗಿ ಹವಾಲ್ದಾರ್ ಉಪಸ್ಥಿತರಿದ್ದರು.

ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ