ವಿ ಜಿ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ
ವಿ ಜಿ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ
ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ಪುಟ್ಟಮಣಿ ದೇವಿದಾಸ ಸಹಾಯಕ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರು ಗೋದುತಾಯಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ಇವರು ತಮ್ಮ ಮುಖ್ಯ ಅತಿಥಿಯ ಭಾಷಣದಲ್ಲಿ ಭಾಷೆಯ ಮಹತ್ವ ವೈಶಿಷ್ಟತೆಗಳು, ಭಾಷೆಯ ಅಳಿವು ಉಳಿವು ವಿವಿಧ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಕನ್ನಡ ಭಾಷೆಯ ಮಹತ್ವವನ್ನು ಮತ್ತು ವಿವಿಧ ಭಾಷೆಗಳ ಅಳವಡಿಕೆಯ ಮೂಲಕ ಭಾಷೆಯ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಪ್ರಾರ್ಥನೆ ಕು.ತಸ್ಮಿಯಾ ರೂಬಾ ಬಿ.ಎಸ್ಸಿ ನಾಲ್ಕನೇ ಸೆಮಿಸ್ಟರ್ ನ ವಿದ್ಯಾರ್ಥಿನಿಯಿಂದ
ಸ್ವಾಗತ ಭಾಷಣ ಉರ್ದು ವಿಭಾಗದ ಮುಖ್ಯಸ್ಥರಾದ ಡಾ ಮೌಶಿನಾ ಫಾತಿಮಾ ಅವರಿಂದ ಕಾರ್ಯಕ್ರಮದ ಮುಖ್ಯಅತಿಥಿ ಪರಿಚಯ ಡಾ ಮಮತಾ ಬಿ ನಾಟಿಕಾರ್ ಅವರಿಂದ
ಕಾರ್ಯಕ್ರಮದ ವಂದನಾರ್ಪಣೆ ಹಿಂದಿ ವಿಭಾಗದ ಉಪನ್ಯಾಸಕಿ ಶ್ರೀಮತಿ ಕವಿತಾ ಠಾಕೂರ್ ಅವರಿಂದ ನಿರೂಪಣೆ ಕನ್ನಡ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಬಸಮ್ಮ ಗೊಬ್ಬುರ
ಕಾರ್ಯಕ್ರಮದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ ಜ್ಯೋತಿಪ್ರಕಾಶ ದೇಶಮುಖ, ಶ್ರೀಮತಿ ಕವಿತಾ ಎ ಎಮ್, ಡಾ ಶ್ರೀದೇವಿ ಸಿದ್ದಣ್ಣ ,ಶ್ರೀಮತಿ ಅಶ್ವಿನಿ ಮಠ್ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
