ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ,ರಾಜಶೇಖರ್ ಗೂಗಲ್ ನೇಮಕ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ,ರಾಜಶೇಖರ್ ಗೂಗಲ್ ನೇಮಕ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ,ರಾಜಶೇಖರ್ ಗೂಗಲ್ ನೇಮಕ

ಶಹಪುರ : ಸಮೀಪದ ನಗನೂರು ಗ್ರಾಮದ ಹಿರಿಯ ಮುಖಂಡ ರಾಜಶೇಖರ ಗೂಗಲ್ ಅವರನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ನೀಡಿದ್ದಾರೆ.

ಬಿಜೆಪಿ ಪಕ್ಷ ನನಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ, ಆದ್ದರಿಂದ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವುದರ ಜೊತೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂಬರುವ ದಿನಗಳಲ್ಲಿ ತಾಲೂಕಿನಲ್ಲಿ ಬಿಜೆಪಿ ಪಕ್ಷ ಆಡಳಿತಕ್ಕೆ ಬರಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ನೂತನ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ರಾಜಶೇಖರ್ ಗೂಗಲ್ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಅಮೀನರೆಡ್ಡಿ ಪಾಟೀಲ್ ಯಾಳಗಿ ಮಾತನಾಡಿ ಬಿಜೆಪಿ ಪಕ್ಷದ ಬಲವರ್ಧನೆಗಾಗಿ ಮತ್ತಷ್ಟು ಪಕ್ಷ ಸಂಘಟನೆ ಅತ್ಯವಶ್ಯಕವಾಗಿದೆ, ಅತಿ ಹೆಚ್ಚು ಯುವಕರರು ಪಕ್ಷ ಸಂಘಟಿಸುವಲ್ಲಿ ಭಾಗವಹಿಸುವುದರ ಜೊತೆಗೆ ಮೋದಿ ಹಾಗೂ ವಿಜಯೇಂದ್ರ ಅವರ ಕೈ ಬಲಪಡಿಸುವುದರಲ್ಲಿ ಶ್ರಮಿಸಬೇಕಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ಬಿಜೆಪಿ ಪಕ್ಷದ ಯುವ ಮುಖಂಡರಾದ ಶಿವರಾಜ ದೇಶಮುಖ,ಅಡಿವೆಪ್ಪ ಜಾಕಾ, ತಿರುಪತಿ ಹತ್ತಿಕಟಗಿ ತಿರುಪತಿ ಸೇರಿ,ಚಂದ್ರಶೇಖರ ಯಾಳಗಿ, ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.