ವಸತಿ ಶಾಲೆ ಕಾಮಗಾರಿ ಕಳಪೆ - ಪ್ರದೀಪ್ ಅಣಬಿ ಆರೋಪ
ವಸತಿ ಶಾಲೆ ಕಾಮಗಾರಿ ಕಳಪೆ - ಪ್ರದೀಪ್ ಅಣಬಿ ಆರೋಪ
ಶಹಪುರ : ತಾಲೂಕಿನ ಶಿರವಾಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಮೂರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಳಪೆ ಕಾಮಗಾರಿಯಾಗಿದೆ ಎಂದು ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ ಆರೋಪಿಸಿದ್ದಾರೆ.
ಈ ಕಟ್ಟಡ ಕಾಮಗಾರಿಯಲ್ಲಿ ಮಾನದಂಡಗಳು ಪಾಲಿಸದೆ,ಕಳಪೆ ಸಾಮಗ್ರಿಗಳು ಬಳಕೆ ಮಾಡಿ ನಿರ್ಲಕ್ಷ್ಯ ವಹಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ,ಈ ಕುರಿತು ಸಾಕಷ್ಟು ಬಾರಿ ಮೇಲಾಧಿಕಾರಿಗಳ ಗಮನಕ್ಕೂ ತಂದರು ಪ್ರಯೋಜನೆಯ ಆಗಿಲ್ಲ.
ಸುಮಾರು 15-20 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಕಟ್ಟಡ ಭವಿಷ್ಯದಲ್ಲಿ ವಿದ್ಯಾರ್ಥಿಗಳ ಜೀವ ಮತ್ತು ಭದ್ರತೆಗೆ ಅಪಾಯ ಉಂಟಾಗುವ ಆತಂಕ ಇನ್ನಷ್ಟು ಗಂಭೀರವಾಗಿದೆ,ಕೂಡಲೇ ಈ ಕಾಮಗಾರಿ ಸ್ಥಗಿತಗೊಳಿಸಿ ಸೂಕ್ತ ಪರಿಶೀಲನೆಗೆ ಆದೇಶಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಆದ್ದರಿಂದ ಕಳಪೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.
