ಪಿಎಸ್‌ಐ ಪರಶುರಾಮ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಪತ್ನಿ ಶ್ವೇತಾ ಗಂಭೀರ ಆರೋಪ

ಪಿಎಸ್‌ಐ ಪರಶುರಾಮ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಪತ್ನಿ ಶ್ವೇತಾ ಗಂಭೀರ ಆರೋಪ

ಯಾದಗಿರಿ : ೦೩ನೇ ಆಗಸ್ಟ್,

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಆಕಸ್ಮಿಕ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದ್ದು,, ಅವರ ಪತ್ನಿ ಸ್ಥಳೀಯ ಶಾಸಕರ ವಿರುದ್ಧ ಆರೋಪ ಮಾಡಿದ್ದಾರೆ.

ನಿನ್ನೆ ಸಂಜೆ ಪೊಲೀಸ್ ಕಾಲೋನಿಯ ನಿವಾಸದಲ್ಲಿ ಆಕಸ್ಮಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆದರೆ, ಈ ಪ್ರಕರಣವು ಈಗ ರಾಜ್ಯದ ಗಮನ ಸೆಳೆದಿದ್ದು, ಹೊಸ ತಿರುವು ಪಡೆದುಕೊಂಡಿದೆ. 

ಪಿಎಸ್‌ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಕಾರಣ” ಎಂದು ಪಿಎಸ್ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರಿಗೆ ದೂರು ಸಲ್ಲಿಸಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವುವಂತೆ ಆಗ್ರಹಿಸಿದ್ದಾರೆ. ವರ್ಗಾವಣೆಗೆ ಶಾಸಕರು ಹಣದ ಬೇಡಿಕೆ ಇಟ್ಟಿದ್ದರು,

ಬಳಿಕ ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದ ಪಿಎಸ್ಐ ಪರಶುರಾಮ ಅವರು ತೀವ್ರ ಒತ್ತಡಕ್ಕೆ ಒಳಗಾಗಿ ಅವರಿಗೆ ಹೃದಯಾಘಾತವಾಗಿದೆ.ಎಂದು ಅವರ ಪತ್ನಿ ಆರೋಪಿಸಿದ್ದಾರೆ.

ಪಿಎಸ್ಐ ಸಾವು ಕುರಿತು ಗೃಹ ಸಚಿವ ಪರಮೇಶ್ವರ್ ತನಿಖೆಗೆ ಆದೇಶ

  ಯಾದಗಿರಿ ಠಾಣೆಯ ಪಿಎಸ್ಐ ಪರಶುರಾಮ ಸಾವಿನ ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, “ಈ ಬಗ್ಗೆ ನಾನು ತನಿಖೆಗೆ ಸೂಚನೆ ನೀಡಿದ್ದೇನೆ. ಅವರ ಪತ್ನಿಯ ಆರೋಪಗಳನ್ನೂ ಸಹ ಪರಿಗಣಿಸುತ್ತೇವೆ.

 ಆ ನಿಟ್ಟಿನಲ್ಲಿಯೂ ತನಿಖೆ ಮಾಡುವಂತೆ ಸೂಚಿಸಿದ್ದೇನೆ” ಎಂದು ಸಚಿವರು ತಿಳಿಸಿದ್ದಾರೆ.