ಚೆನ್ನೂರ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ
ಚೆನ್ನೂರ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕು ವ್ಯಾಪ್ತಿಯ ಚೆನ್ನೂರ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಪಿಎಂ ಶ್ರೀ ಯೋಜನೆ ಅಡಿಯಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.
ತಾಲೂಕಿನ ಜೇನ್ನ ಶಿಟೋರಿಯೋ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಜೇಟ್ಟೆಪ್ಪ ಎಸ್. ಪೂಜಾರಿ ಅವರು ವಿದ್ಯಾರ್ಥಿನಿಯರಿಗೆ ಸ್ವಯಂರಕ್ಷಣೆ ಕುರಿತಂತೆ ಕರಾಟೆ ತರಬೇತಿ ನೀಡಿದರು. ತರಬೇತಿಯ ವೇಳೆ ದೈಹಿಕ ಕ್ಷಮತೆ, ಆತ್ಮವಿಶ್ವಾಸ ಮತ್ತು ತುರ್ತು ಪರಿಸ್ಥಿತಿಯಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ವಿಧಾನಗಳ ಕುರಿತು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯಗುರು ಮಲ್ಲಿಕಾರ್ಜುನ ಹೂಗಾರ ಅವರು, ಇತ್ತೀಚಿನ ದಿನಮಾನಗಳಲ್ಲಿ ಅಮಾಯಕ ಜನರ ಮೇಲೆ ಮಾರಣಾಂತಿಕ ಹಲ್ಲೆ, ಕೊಲೆ ಹಾಗೂ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಹೀನಕೃತ್ಯಗಳ ಹಿನ್ನೆಲೆ ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಸ್ವಯಂರಕ್ಷಣೆ ಕಲೆಯನ್ನು ಕಡ್ಡಾಯವಾಗಿ ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ಕರಾಟೆ ಕಲೆ ಆತ್ಮರಕ್ಷಣೆ ಮಾತ್ರವಲ್ಲ, ಶಿಸ್ತು ಮತ್ತು ಧೈರ್ಯವನ್ನು ಬೆಳೆಸುವ ಕಲೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಕರಾದ ಎಸ್.ಎಸ್. ಗೊಂಬಿಮಠ ಹಾಗೂ ಸಿದ್ದರಾಮ ಸರ್ ಉಪಸ್ಥಿತರಿದ್ದರು.
ವರದಿ: ಜೇಟ್ಟೆಪ್ಪ ಎಸ್. ಪೂಜಾರಿ
