ಧನರಾಜ ವಿ. ರಾಂಪುರೆ ಅವರಿಗೆ ಇಂದು ಬೀಳ್ಕೊಡುಗೆ ಸಮಾರಂಭ
ಧನರಾಜ ವಿ. ರಾಂಪುರೆ ಅವರಿಗೆ ಇಂದು ಬೀಳ್ಕೊಡುಗೆ ಸಮಾರಂಭ
ಭಾಲ್ಕಿ: ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ಸುಮಾರು 40 ವರ್ಷ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕಿರಿಯ ತರಬೇತಿ ಅಧಿಕಾರಿಗಳಾದ ಶ್ರೀ ಧನರಾಜ್ ವಿ. ರಾಂಪುರೆ ಅವರು ವಯೋನಿವೃತ್ತಿ ಹೊಂದುತ್ತಿದ್ದು, ಅವರ ಗೌರವಾರ್ಥವಾಗಿ ಫೆಬ್ರವರಿ 28, 2026ರಂದು ಬೆಳಿಗ್ಗೆ 11:00 ಗಂಟೆಗೆ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆ ಕಾಲೇಜಿನ ಆವರಣದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದವರಾದ ಇವರು 20ನೇ ವಯಸ್ಸಿನಲ್ಲಿ
1986ರಲ್ಲಿ ಸೇವೆ ಪ್ರಾರಂಭ ಮಾಡಿರುತ್ತಾರೆ.
ಇವರಿಂದ ಮಾರ್ಗದರ್ಶನ ಪಡೆದ ಸಾವಿರಾರು ವಿದ್ಯಾರ್ಥಿಗಳು ಇಂದು ವಿವಿಧ ನಗರಗಳಲ್ಲಿ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.
ಇವರ ಸಾರ್ಥಕ 40 ವರ್ಷದ ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಎಸ್.ವಿ.ಇ ಸಂಸ್ಥೆಯವರು ಹಾಗೂ ಡಿಗ್ಗಿ ಗ್ರಾಮಸ್ಥರು ಮತ್ತು ಕುಟುಂಬ ವರ್ಗದವರಿಗೂ ಅವರಿಗೆ ಅಭಿನಂದನೆಗಳು ಸಲ್ಲಿಸಿ ಸಾಮಾಜಿಕ ಜೀವನಕ್ಕೆ ಶುಭ ಹಾರೈಸಿದರೆ.
