ಬಿ.ಬಿ.ನಾಯಕ್ ಗೆ ಬಂಜಾರ ಸೇವಾ ಶಿರೋಮಣಿ ಪ್ರಶಸ್ತಿ ಪ್ರದಾನ
ಬಿ.ಬಿ.ನಾಯಕ್ ಗೆ ಬಂಜಾರ ಸೇವಾ ಶಿರೋಮಣಿ ಪ್ರಶಸ್ತಿ ಪ್ರದಾನ
ಕಲಬುರಗಿ : ಸಮಾಜ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಕಲಬುರಗಿ ಜಿಲ್ಲಾ ಬಂಜಾರ ಸೇವಾ ಸಂಘದ ಅಧ್ಯಕ್ಷರಾದ ಬಿ. ಬಿ.ನಾಯಕ್ ಗೆ ನವದೆಹಲಿಯ ಸಂತ ಸೇವಾಲಾಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಂಜಾರ ಸೇವಾ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನವದೆಹಲಿಯ ಡಾ.ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಫೆ.28ರಂದು ಟ್ರಸ್ಟ್ ಆಯೋಜಿಸಿದ ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್ ಪ್ರಶಸ್ತಿ ಪ್ರದಾನ ಮಾಡಿದರು. ಉಚಿತ ಆರೋಗ್ಯ ಶಿಬಿರ ,ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಿ ಜನಪರ ಕೆಲಸ ಮಾಡಿದ ನಾಯಕ್ ಸಮಾಜಕ್ಕೆ ಇನ್ನಷ್ಟು ಉತ್ತಮ ಕೆಲಸ ಮಾಡಲು ಈ ಪ್ರಶಸ್ತಿ ಪ್ರೇರಣೆಯಾಗಲಿ ಎಂದು ಜಾಧವ್ ಶುಭ ಹಾರೈಸಿದರು.ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಅಧ್ಯಕ್ಷ ಶಂಕರ್ ಪವಾರ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
