ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಿ - ಶರಣಪ್ಪ ಸಲದಾಪುರ
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಿ - ಶರಣಪ್ಪ ಸಲದಾಪುರ
ಶಹಪುರ : ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಕಲಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮಧ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲದಾಪುರ ಹೇಳಿದರು.
ನಗರದ ವೈಷ್ಣವಿ ಸಭಾಂಗಣದಲ್ಲಿ ಮಾತೃ ಛಾಯ ಹಿರಿಯ ಪ್ರಾಥಮಿಕ ಶಾಲೆಯ 14ನೇ ಶಾಲಾ ವಾರ್ಷಿಕೋತ್ಸವ ಹಾಗೂ ಮಾತೃ ಛಾಯಾ ಸಾಂಸ್ಕೃತಿಕ ಹಬ್ಬದ ಪ್ರಯುಕ್ತ ನಾಡಿನ ಸಾಧಕರಿಗೆ ಶ್ರೀ ಕನಕದಾಸ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡೊಳ್ಳು ಬಾರಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಹಾಗೂ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಚಂದ್ರಶೇಖರ್ ಗಂಗಣ್ಣವರು ಮಾತನಾಡಿ ಮನೆಯಲ್ಲಿ ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಜೊತೆ ಜೊತೆಗೆ ಅವರ ಬೌದ್ಧಿಕ ಬೆಳವಣಿಗೆಗೆ ಸಹಕರಿಸಬೇಕು ಹಾಗೂ ಈ ಶಾಲೆಯ ವಿದ್ಯಾರ್ಥಿಗಳಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಡಿನ ಸಾಧಕರಾದ ಚಂದ್ರಕಲಾ ಗೂಗಲ್, ಮೀನಾಕ್ಷಿ ಹೊಸಮನಿ,ಸಂಜೀವ ಕುಮಾರ್ ಹತಿವಾಳೆ,ಅನಿಲ್ ಬಳ್ಳೂರಕರಗೆ,ರಾಜ್ಯಮಟ್ಟದ ಶ್ರೀ ಕನಕದಾಸ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶೇಖರ್ ದೊರೆ,ಪಾಶಾ ಪಟೇಲ್,ರಾಯಪ್ಪ ಚೆಲುವಾದಿ,ಸಂಚಿತಾ ಆನೆಗುಂದಿ, ಪ್ರಶಾಂತ್ ಬಿರಾದಾರ ಅವರನ್ನು ವಿಶೇಷವಾಗಿ ಸನ್ಮಾನಿಸಿದರು.
ಅಗತೀರ್ಥ ಹಾಲುಮತ ಮೂಲ ಗುರುಪೀಠದ ಶಾಖಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು,ಈ ಸಮಾರಂಭದ ವೇದಿಕೆಯ ಮೇಲೆ ಉದ್ಯಮಿಗಳಾದ ಮಹಾರಾಜ್ ದಿಗ್ಗಿ ಬಿಜೆಪಿಯ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಕಂದಕೂರ, ತಾಲೂಕ್ ಅಧ್ಯಕ್ಷ ಎಲ್ಲಪ್ಪ ನರಿ, ಸಾಯಬಣ್ಣ ಸೇರಿದಂತೆ ಇನ್ನಿತರರು ಉಪಸಿತರಿದ್ದರು.
ಸಂಸ್ಥೆಯ ಅಧ್ಯಕ್ಷ ತಿಪ್ಪಣ್ಣ ಕ್ಯಾತಾನಾಳ ಪ್ರಾಸ್ತಾವಿಕ ಮಾತುಗಳಾಡಿದರು, ವಿದ್ಯ ಆನೆಗುಂದಿ ಸ್ವಾಗತಿಸಿದರು,ಸುರೇಶ್ ಅರುಣಿ ನಿರೂಪಿಸಿದರು ಹೀನಾ ಬೇಗಂ ವಂದಿಸಿದರು.ನಂತರ ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
