ಜನಪರ-ಜೀವಪರ ಬಜೆಟ್ ಮಂಡನೆ : ಶಿವಶರಣರೆಡ್ಡಿ ಪಾಟೀಲ
ಜನಪರ-ಜೀವಪರ ಬಜೆಟ್ ಮಂಡನೆ : ಶಿವಶರಣರೆಡ್ಡಿ ಪಾಟೀಲ
ಸೇಡಂ.ಮಾ. 06-ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ನೇ ರಾಜ್ಯ ಬಜೆಟ್ ರಾಜ್ಯದ ಹಿತ ಕಾಪಾಡುವಲ್ಲಿ ಅತ್ಯಂತ ಪೂರಕ ಆಯವ್ಯಯವಾಗಿದೆ. ಇದೊಂದು ಜನಪರ-ಜೀವಪರ ಬಜೆಟ್ ಎಂದೇ ಹೇಳಬಹುದು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸೇಡಂ ತಾಲೂಕಾಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಸಮಗ್ರ ಹಿತದೃಷ್ಟಿಯಿಂದ ರಾಜ್ಯ ಬಜೆಟ್ ಅಭಿವೃದ್ಧಿ ಯೋಜನೆಗಳಿಂದ ಕೂಡಿದ್ದು, ಮುಖ್ಯವಾಗಿ 1200 ಕೋಟಿಗೂ ಅಧಿಕ ವೆಚ್ಚದಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಗೆ ಒತ್ತು ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿ ಚಿಂತನಗಳಿಗೆ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ದೊರಕಿದೆ ಎಂಸು ಹರ್ಷ ವ್ಯಕ್ತಪಡಿಸಿದ್ದಾರೆ.
ವೈದ್ಯಕೀಯ ಶಿಕ್ಷಣದ ಕೂಲಕ ಪ್ರತಿ ಜಿಲ್ಲಗೆ ಮೆಡಿಕಲ್ ಕಾಲೇಜು, ಟ್ರಾಮಾ ಕೇರ್ ಸೆಂಟರ್, ಸೂಪರ್ ಸ್ಪಟೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ಕನಸಿಗೆ ರಾಜ್ಯ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ರಾಜ್ಯ ಕಾಂಗ್ರೆಸ್ ಸರಕಾರ ತಲುಪುವಲ್ಲಿ ಯಶಸ್ವಿ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯನವರಿಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ನಮ್ಮ ನಾಯಕರಾದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುವೆ ಎಂದಿದ್ದಾರೆ.
