ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ಪಾಟೀಲರಿಗೆ ಗೌರವ ಸನ್ಮಾನ
ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ಪಾಟೀಲರಿಗೆ ಗೌರವ ಸನ್ಮಾನ
ಕಲಬುರಗಿ: ನಗರದ ವಿಶ್ವೇಶ್ವರಯ್ಯ ಸಭಾಭವನದಲ್ಲಿ ವಿಶ್ರಾಂತ ನ್ಯಾಯಮೂರ್ತಿ ನಾಡೋಜ ಶಿವರಾಜ ಪಾಟೀಲ ಅವರನ್ನು ಗುಲ್ಬರ್ಗ ನ್ಯಾಯವಾದಿಗಳ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗುಲ್ಬರ್ಗ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಎಸ್.ವಿ. ಪಸಾರ, ಪ್ರಧಾನ ಕಾರ್ಯದರ್ಶಿ ಸಿದ್ದರಾಮ ಬವಾಡಿ ಹಾಗೂ ಸಂಘದ ಪದಾಧಿಕಾರಿಗಳು ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರಿಗೆ ಶಾಲು ಹೊದಿಸಿ, ಫಲಕ ನೀಡಿ ಸನ್ಮಾನಿಸಿದರು.
ನ್ಯಾಯಾಂಗ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಮಾತನಾಡಿದ ಪದಾಧಿಕಾರಿಗಳು, ಸಮಾಜಕ್ಕೆ ನ್ಯಾಯಬದ್ಧ ಮೌಲ್ಯಗಳನ್ನು ನೀಡುವಲ್ಲಿ ಶಿವರಾಜ ಪಾಟೀಲ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
