ಸೇಡಂ ಬ್ಲಾಕ್ ಕಾಂಗ್ರೆಸ್ ಕಚೇರಿ ನೂತನ ಕಟ್ಟಡ ಭೂಮಿ ಪೂಜೆ
ಸೇಡಂ ಬ್ಲಾಕ್ ಕಾಂಗ್ರೆಸ್ ಕಚೇರಿ ನೂತನ ಕಟ್ಟಡ ಭೂಮಿ ಪೂಜೆ
ಇಲ್ಲಿನ ಸೇಡಂ ಪಟ್ಟಣದ ಊಡಗಿ ರಸ್ತೆಯ ಗಾಂಧಿ ನಗರದಲ್ಲಿ ಸೇಡಂ ಬ್ಲಾಕ್ ಕಾಂಗ್ರೆಸ್ ನೂತನ ಕಚೇರಿಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ನೂತನ ಕಾಂಗ್ರೆಸ್ ಕಚೇರಿ ನಿರ್ಮಿಸುವುದರ ಕುರಿತು ಶನಿವಾರ ಭೂಮಿ ಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಸುಭಾಷ ರಾಠೋಡ ಒಳಗೊಂಡಂತೆ ಅನೇಕ ಮುಖಂಡರು, ಕಾಂಗ್ರೆಸ್ ಪಕ್ಷದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹಾಗೂ ಸೇಡಂ-ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಘಟಕದ ಪ್ರಮುಖರು ಉಪಸ್ಥಿತರಿದ್ದರು.
