ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರ್ಗಿಯ ಸರ್ವ ಸದಸ್ಯರ ಸಾಮಾನ್ಯ ಸಭೆ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರ್ಗಿಯ ಸರ್ವ ಸದಸ್ಯರ ಸಾಮಾನ್ಯ ಸಭೆ
ಕಲಬುರಗಿ : ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರ್ಗಿ ಅಧ್ಯಕ್ಷರಾದ ಬಿ ಫೌಜೀಯಾ ತರನ್ನುಮ ರವರು 2024 -2025 ಸಾಲಿನ ಮುಂದೂಡಿದ ರೆಡ್ ಕ್ರಾಸ್ ಸಂಸ್ಥೆಯ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ದಿನಾಂಕ 11-3-2026ರಂದು ಬೆಳಿಗ್ಗೆ
11-00 ಗಂಟೆಗೆ ಕರೆಯಲು ಆದೇಶಿಸಿದ್ದಾರೆ ಎಂದು ಕಲಬುರಗಿ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ತಿಳಿಸಿದ್ದಾರೆ.
ಆದ್ದರಿಂದ ಸಂಸ್ಥೆಯ ಗೌರವಾನ್ವಿತ ಸರ್ವ ಸದಸ್ಯರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಲು
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರ್ಗಿಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ಸರ್ವ ಸದಸ್ಯರಲ್ಲಿ ಮನವಿ ಮಾಡಿದ್ದಾರೆ.
