ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಕಮಲನಗರ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು.

ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ ಗಡಿ ಕ್ಷೇತ್ರವಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆ ಹೆಚ್ಚಾಗಿದೆ. ಬೇರೆ ಭಾಗಗಳಿಗೆ ಹೋಲಿಸಿದರೆ ನಮ್ಮಲ್ಲಿ ಸಮಸ್ಯೆ ಬಹಳಷ್ಟಿದ್ದು, ಇದರಿಂದ ಬಡ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಸ್ಯೆಯ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. 

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೂಚಿಸುವ ಔಷಧ ಹೊರಗಿನಿಂದ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಬಡ ರೋಗಿಗಳ ಮೇಲೆ ಆರ್ಥಿಕ ಭಾರ ಬೀಳುತ್ತಿದೆ. ಆದ್ದರಿಂದ ತಕ್ಷಣವೇ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ ಅವರು, ಕೆಎಸ್ಎಂಎಸ್ಸಿಎಲ್ ಮೂಲಕ ಔಷಧ ಪೂರೈಕೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸುವ ಕಾರ್ಯ ನಡೆಯುತ್ತಿದ್ದು, ಟೆಂಡರ್ ಆಗಿದೆ. ಖರೀದಿ ಆದೇಶಗಳಾಗಿವೆ. ಮುಂದಿನ ದಿನಗಳಲ್ಲಿ ಔಷಧ ಕೊರತೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

*ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಪ್ರಸ್ತಾಪ:* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಪ್ರೋತ್ಸಾಹಧನ ವಿತರಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರು ಚುಕ್ಕೆ‌ ಗುರುತಿಲ್ಲದ ಪ್ರಶ್ನೆಯ ಮೂಲಕ ಸರ್ಕಾರದ ಗಮನ ಸೆಳೆದರು.