ನಾಳೆ ದತ್ತಿ ಉಪನ್ಯಾಸ
ನಾಳೆ ದತ್ತಿ ಉಪನ್ಯಾಸ
ಕಲಬುರಗಿ: ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ಲಿಂ. ಯಶೋದಮ್ಮ ಸಿದ್ದಬಟ್ಟೆ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆರಾಧನಾ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದಿನಾಂಕ 14.3.2026 ರಂದು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಆರಾಧನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಚೇತನಕುಮಾರ ಗಾಂಗಜಿಯವರು ಉದ್ಘಾಟಿಸಲಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರಮಾಲಿಕೆಯಲ್ಲಿ ಕುವೆಂಪು ಅವರ ಕುರಿತು ಡಾ. ಗವಿಸಿದ್ದಪ್ಪ ಪಾಟೀಲ ಅವರು ಮಾತನಾಡಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಅಧ್ಯಕ್ಷರಾದ ಅಪ್ಪಾರಾವ ಅಕ್ಕೋಣೆಯವರು ವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಡಾ. ಸ್ವಾಮೀರಾವ ಕುಲಕರ್ಣಿ, ಸಾಹಿತಿ ಡಾ.ಕಾವ್ಯಶ್ರೀ ಮಹಾಗಾoವ್ಕರ ಸಂಚಾಲಕರಾದ ಡಾ. ಶರಣಬಸಪ್ಪ ವಡ್ಡನಕೇರಿ ಉಪನ್ಯಾಸಕರಾದ ಶ್ರೀ ಕಾಶಿನಾಥ ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಡಾ.ಶರಣಬಸಪ್ಪ ವಡ್ಡನಕೇರಿ ತಿಳಿಸಿದ್ದಾರೆ.
