ಅಪರಾಜೀತ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಅಪರಾಜೀತ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಅಪರಾಜೀತ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಕಲಬುರಗಿ: ನಗರದ ಉದನೂರ ವರ್ತೂಲ ರಸ್ತೆಗೆ ಹೊಂದಿಕೊಂಡಿರುವ ಮಾಣಿಕ್ ಪ್ರಭು ಬಡಾವಣೆಯ ಅಪರಾಜೀತ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮದಿಂದ ನಡೆಯಿತು.

ಜೈ ಭವಾನಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಕುಮಾರಿ ಭೂಮಿಕಾ ಭಂಡಾರಿ ಅವರು ಕಾರ್ಯಕ್ರಮವನ್ನು ಸ್ವಾಗತಿಸಿದರು. ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ಪಾಲಕರು ಹಾಗೂ ಪೋಷಕರಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಲಕ್ಷ್ಮೀ ದತ್ತಾತ್ರೇಯ ಪಾಟೀಲ ಮಾತನಾಡಿ, ಈ ಭಾಗದಲ್ಲಿ ದಶಕದಿಂದ ಶಿಕ್ಷಣ, ತಾಂತ್ರಿಕ ಹಾಗೂ ಪರಂಪರಿಕ ವಿದ್ಯಾ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಮನೆಯೇ ವಿದ್ಯಾ ಕೇಂದ್ರವಾಗಿಸಿ ಸತಿ–ಪತಿಗಳು ಒಟ್ಟಾಗಿ ಶ್ರಮಿಸಿ ಶಿಕ್ಷಣ ಸೇವೆ ಮಾಡುತ್ತಿರುವುದು ಮಾದರಿಯಾಗಿದೆ ಎಂದರು.

ಸಂಸ್ಥೆಯ ಅಧ್ಯಕ್ಷೆ ಪುಷ್ಪಾಂಜಲಿ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯವಾದಿ ರಾಜಗೋಪಾಲ ಭಂಡಾರಿ ವಂದಿಸಿದರು.