ನಿರಂತರ ಅಧ್ಯಯನದಿಂದ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ದೊರೆಯಲು ಸಾಧ್ಯ
ನಿರಂತರ ಅಧ್ಯಯನದಿಂದ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ದೊರೆಯಲು ಸಾಧ್ಯ
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಪ್ರಖ್ಯಾತ ಕಂಪ್ಯೂಟರ್ ಶಿಕ್ಷಣ ಕೇಂದ್ರದಲ್ಲಿ , ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾ-ಗಿ ನರೇಗಲ್ ಪಟ್ಟಣದ ಸೈಬರ್ ಟೆಕ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು,
ಈ ಒಂದು ಕಾರ್ಯಾಗಾರದಲ್ಲಿ ಕೋಚಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ್ ಡಿ. ಎಸ್.ಭಾಗವಹಿಸಿ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ , ವಿದ್ಯಾರ್ಥಿಗಳು ಜೀವನದಲ್ಲಿ ಒಂದು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ತಲುಪಲು ಶ್ರದ್ದೆ, ಸತತ ಪರಿಶ್ರಮ ಹಾಗೂ ಆತ್ಮ-ಸ್ಥೆರ್ಯದಿಂದ ಪ್ರಯತ್ನಿಸಬೇಕು. ಆಗ ಮಾತ್ರ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ತರಬೇತಿ ಕೇಂದ್ರದ ಮುಖ್ಯಸ್ಥ ವಿರೂಪಾಕ್ಷಪ್ಪ ಸಂಗನಾಳ, ರವಿ ಶಿವಷಿಂಪರ, ಅಂದಯ್ಯ ಹಿರೇಮಠ, ರಾಜು ಬಿಸನಲ್ಲಿ ಹಾಗೂ ಅನೇಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು,
ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ
