ಅಕ್ಕನ ವಚನಗಳು ಸರ್ವಕಾಲಕ್ಕೂ ಪ್ರಸ್ತುತ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪ ಅಭಿಮತ
ಅಕ್ಕನ ವಚನಗಳು ಸರ್ವಕಾಲಕ್ಕೂ ಪ್ರಸ್ತುತ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪ ಅಭಿಮತ
ಕಲಬುರಗಿ : ಅಕ್ಕನ ವಚನಗಳಲ್ಲಿನ ವೈರಾಗ್ಯ, ಭಕ್ತಿ ಮತ್ತು ಮಹಿಳಾ ಸ್ವಾತಂತ್ರ್ಯದ ಕುರಿತು ಸ್ಮರಿಸುವ ಮೂಲಕ, ಸಮಾಜಕ್ಕೆ ಅಕ್ಕ ಹಾಗೂ ಅವರ ಸಮಕಾಲೀನ ಶರಣರ ತತ್ವಾದರ್ಶಗಳು ಸಾರ್ವಕಾಲಿಕವಾಗಿವೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಗಳಾದ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.
ಜಾಗತಿಕ ಲಿಂಗಾಯತ ಮಹಾಸಭಾದ ಕಲಬುರಗಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪೂಜ್ಯ ಡಾ ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಆಯೋಜಿಸಿದ್ದ, 12 ನೇ ಶತಮಾನದ ಪ್ರಮುಖ ವಚನಕಾರ್ತಿ ಹಾಗೂ ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ ಅವರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈರಾಗ್ಯನಿಧಿ ಅಕ್ಕಮಹಾದೇವಿಯವರ ಜಯಂತಿಯು ಕೇವಲ ಆಚರಣೆ ಮಾತ್ರವಲ್ಲದೆ, ವಚನ ಸಾಹಿತ್ಯ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಪ್ರೇರಣೆಯಾಗಿವೆ ಎಂದು ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಅವ್ವಾಜಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪ ಅವರಿಗೆ ಜಾಗತಿಕ ಮಹಿಳಾ ಶಕ್ತಿ ಅಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕಿಯರಾದ, ಡಾ ಭಾಗ್ಯಶ್ರೀ ಶರಣಪ್ರಕಾಶ್ ಪಾಟೀಲ್, ಅಮರೇಶ್ವರಿ ಬಾಬುರಾವ್ ಚಿಂಚನಸೂರ, ಮಾಲಾ ಕಣ್ಣಿ, ಪರ್ವೀನ್ ಸುಲ್ತಾನಾ ಅವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಕ್ಕ ಮಹಾದೇವಿ ಅವರ ಜೀವನ ಹಾಗೂ ವಚನ ಸಾಹಿತ್ಯ ಕುರಿತು ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ ಶಿವಗಂಗಾ ರುಮ್ಮಾ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ, ರೇಷ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಭಾರತಿ ಎನ್ ರೇಷ್ಮಿ, ನಾಡಿನ ಖ್ಯಾತ ಜಾನಪದ ತಜ್ಞೆ ಡಾ ನೀಲಾಂಬಿಕಾ ಪೋಲಿಸ್ ಪಾಟೀಲ್, ಆರ್ ಜಿ ಶೇಟಗಾರ್, ವೇದಿಕೆಯಲ್ಲಿದ್ದರು.
ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಳಿನಿ ಮಹಾಗಾಂವಕರ್ ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ರವೀಂದ್ರ ಶಾಬಾದಿ, ಶರಣಬಸವೇಶ್ವರ ಸಂಸ್ಥಾನದ ಆಡಳಿತಾಧಿಕಾರಿ ಹಾಗೂ ಸಮಾಜಮುಖಿ ವೈದ್ಯ ಡಾ ಅಲ್ಲಮಪ್ರಭು ದೇಶಮುಖ, ಡಾ ಮಲ್ಲಿಕಾರ್ಜುನ ವಡ್ಡನಕೇರಿ, ಪ್ರೊ ಶಾಂತಾ ಮಠ, ರಾಜಶೇಖರ ಯಂಕ್ಕಂಚಿ, ಪ್ರೊ ಯಶವಂತರಾಯ ಅಷ್ಠಗಿ ಹಣಮಂತರಾವ ಪಾಟೀಲ್ ಕುಸನೂರ, ಶಿವಶರಣಪ್ಪ ದೇಗಾಂವ, ಡಾ ಆನಂದ ಪಾಟೀಲ ಸಿದ್ದಾಮಣಿ, ಶಾಂತಪ್ಪ ಪಾಟೀಲ್ ಸಣ್ಣೂರ, ರಾಜಶೇಖರ ಮಠಪತಿ, ಡಾ ಕಲ್ಪನಾ ಭೀಮಳ್ಳಿ ಡಾ ಶಾಂತಾ ಅಷ್ಠಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
