ಡಾ.ಸಿದ್ಧತೋಟೇಂದ್ರ ಶ್ರೀಗಳ ದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ನಾಳೆ ನಾಲವಾರ ಮಠಕ್ಕೆ
ಡಾ.ಸಿದ್ಧತೋಟೇಂದ್ರ ಶ್ರೀಗಳ ದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ನಾಳೆ ನಾಲವಾರ ಮಠಕ್ಕೆ.
ಕಲಬುರಗಿ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಕ್ಷೇತ್ರ ನಾಲವಾರಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಆಗಮಿಸಿ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಕರ್ತೃ ಗದ್ದುಗೆ ಹಾಗೂ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದರ್ಶನಾಶೀರ್ವಾದ ಪಡೆಯಲಿದ್ದಾರೆ.
ನಾಳೆ ಶನಿವಾರ ಸಂಜೆ ಸರಿಯಾಗಿ 4 ಗಂಟೆಗೆ ಶ್ರೀಕ್ಷೇತ್ರಕ್ಕೆ ಆಗಮಿಸಲಿರುವ ನಾಡದೊರೆಯ ಜೊತೆಗೆ ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ. ವೈದ್ಯಕೀಯ ಶಿಕ್ಷಣ ಸಚಿವರು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ. ಮುಜರಾಯಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ನಗರಾಭಿವೃದ್ಧಿ ಖಾತೆ ಸಚಿವರಾದ ಭೈರತಿ ಸುರೇಶ,ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ,, ಪಾಟೀಲ,ಸಣ್ಣ ಕೈಗಾರಿಕಾ ಖಾತೆ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಮುಖಂಡರು ಪೂಜ್ಯರ ದರ್ಶನಾಶೀರ್ವಾದ ಪಡೆಯಲಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ನಡೆಯುವ ಹಲವು ಸಮಾರಂಭಗಳಲ್ಲಿ ನಾಡಿನ ಮುಖ್ಯಮಂತ್ರಿಗಳು ರಾಜ್ಯಪಾಲರು ಕೇಂದ್ರ ಸಚಿವರು ಭಾಗವಹಿಸುತ್ತಾ ಬಂದಿರುತ್ತಾರೆ ಪ್ರಸ್ತುತ ಶ್ರೀ ಸಿದ್ದರಾಮಯ್ಯನವರು ಐದನೇ ಮುಖ್ಯಮಂತ್ರಿಗಳಾಗಿ ಶ್ರೀಮಠಕ್ಕೆ ಆಗಮಿಸುತ್ತಿರುವವರು
ಶ್ರೀಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪೂಜ್ಯರ ದರ್ಶನಾಶೀರ್ವಾದ ಪಡೆಯಲು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ಮನವಿ ಮಾಡಿದ್ದಾರೆ.

