ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ
ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ
ಕಲಬುರಗಿ: ನಗರದ ಬುದ್ಧ ವಿಹಾರದಲ್ಲಿ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಲಬುರಗಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆರಕ್ಷಕ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಶ್ರೀ ಸಿದ್ದಪ್ಪ ಸೈದಾಪುರ ಅವರು ಮಾತನಾಡಿ, ಶಿಬಿರಾರ್ಥಿಗಳು ಶಿಸ್ತು, ಸಮಯಪಾಲನೆ ಮತ್ತು ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಹುದ್ದೆಗಳನ್ನು ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ ಹಿರಿಯ ವರದಿಗಾರರಾದ ಮನೋಜಕುಮಾರ ಗುದ್ದಿ ಅವರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಾಳ್ಮೆಯಿಂದ ಜೀವನ ನಡೆಸಿ ದೇಶಸೇವೆಗೆ ಸದಾ ಸಿದ್ಧರಾಗಿರಬೇಕು ಎಂದು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ಚಂದ್ರಿಕಾ ಪರಮೇಶ್ವರ ಹಾಗೂ ಶ್ರೀ ವಿಜಯಕುಮಾರ ಕಟ್ಟಿಮನಿ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ವಹಿಸಿದ್ದರು.
ವೇದಿಕೆಯಲ್ಲಿ ಡಾ. ವಿಜಯಲಕ್ಷ್ಮಿ ಬಿರಾದಾರ್, ಡಾ. ವೈ. ಎಸ್. ವಗ್ಗಿ, ಕಲಾ ವಿಭಾಗದ ಡೀನ್ ಡಾ. ವಿಜಯಕುಮಾರ ಸಾಲಿಮನಿ, ಡಾ. ರಾಜಕುಮಾರ ಸಲಗರ, ಪರೀಕ್ಷಾ ನಿಯಂತ್ರಕರಾದ ಡಾ. ಟಿ. ವಿ. ಅಡಿವೇಶ, ಡಾ. ರವೀಂದ್ರಕುಮಾರ ಭಂಡಾರಿ, ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ. ಶಿವಲಿಂಗಪ್ಪ ಪಾಟೀಲ, ಡಾ. ಬಸಂತ ಸಾಗರ, ಡಾ. ಮೀನಾಕ್ಷಿ ಹುಗ್ಗಿ, ಡಾ. ರವಿ ಬೌದ್ದೆ, ಡಾ. ಬಲಭೀಮ ಸಾಂಗ್ಲಿ ಹಾಗೂ ಶಿಬಿರಾಧಿಕಾರಿಗಳಾದ ಡಾ. ಅಜ್ರಾ ಪರ್ವೀನ್, ಡಾ. ರಾಜೇಶ ಅಜಬ್ ಸಿಂಗ್, ಡಾ. ಸುಜಾತಾ ದೊಡ್ಡಮನಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪತ್ರಾಂಕಿತ ವ್ಯವಸ್ಥಾಪಕರಾದ ಅಜಯಸಿಂಗ್ ತಿವಾರಿ ಮತ್ತು ಶ್ರೀಮತಿ ಬಿ. ವಿಜಯಲಕ್ಷ್ಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕುಮಾರಿ ಸೌಂದರ್ಯ ಪ್ರಾರ್ಥನೆ ಸಲ್ಲಿಸಿದರು. ಶಿಬಿರಾರ್ಥಿಗಳು ಎನ್‌ಎಸ್‌ಎಸ್ ಗೀತೆ ಹಾಡಿದರು. ಡಾ. ರವಿ ಬೌದ್ದೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಶಿವಲಿಂಗಪ್ಪ ಪಾಟೀಲ ಶಿಬಿರದ ವರದಿ ವಾಚಿಸಿದರು. ಡಾ. ಬಸಂತ ಸಾಗರ ವಂದಿಸಿದರು. ಡಾ. ಬಲಭೀಮ ಸಾಂಗ್ಲಿ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿದರು.
ಏಳು ದಿನಗಳ ಕಾಲ ನಡೆದ ಈ ವಾರ್ಷಿಕ ಶಿಬಿರದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಸಿಬ್ಬಂದಿ ಹಾಗೂ ಬುದ್ಧ ವಿಹಾರದ ಸದಸ್ಯರು ಸೇರಿದಂತೆ ೨೫೦ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.
