ಸರ್ಕಾರಿ ಶಾಲೆಗಳಲ್ಲಿ ಕರಾಟೆ ಶಿಕ್ಷಕರನ್ನು ನೇಮಕ ಮಾಡಬೇಕು: ದೇವರಾಜ್ ಮನವಿ
ಸರ್ಕಾರಿ ಶಾಲೆಗಳಲ್ಲಿ ಕರಾಟೆ ಶಿಕ್ಷಕರನ್ನು ನೇಮಕ ಮಾಡಬೇಕು: ದೇವರಾಜ್ ಮನವಿ
ಯಾದಗಿರಿ: ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಕರಾಟೆ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಸಚಿವರಿಗೆ ಮನವಿ
ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಕಿರುಕುಳದಂತಹ ಹೀನ ಘಟನೆಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಘಟನೆಗಳನ್ನು ತಡೆಗಟ್ಟಲು ಹೆಣ್ಣುಮಕ್ಕಳು ಆತ್ಮರಕ್ಷಣಾ ಕೌಶಲ್ಯಗಳನ್ನು ಹೊಂದಿರುವುದು ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ಶಾಲಾ ಹಂತದಲ್ಲೇ ವಿದ್ಯಾರ್ಥಿನಿಯರಿಗೆ ಕರಾಟೆ ಸೇರಿದಂತೆ ಆತ್ಮರಕ್ಷಣಾ ಕಲೆಗಳನ್ನು ಕಲಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.
ಶಿಕ್ಷಣ ಸಚಿವರು ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಯಲ್ಲಿ ಕರಾಟೆ ಶಿಕ್ಷಕರನ್ನು ಖಾಯಂ ಆಗಿ ನೇಮಕ ಮಾಡುವಂತೆ ಆದೇಶ ಹೊರಡಿಸಬೇಕು ಎಂದು ದೇವರಾಜ್ ಮನವಿ ಮಾಡಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ವಿದ್ಯಾರ್ಥಿನಿಯರ ಭದ್ರತೆಗೂ ಸರ್ಕಾರ ವಿಶೇಷ ಗಮನ ಹರಿಸಬೇಕು. ಕರಾಟೆ ಒಂದು ವಿಶಿಷ್ಟ ಆತ್ಮರಕ್ಷಣಾ ಕಲೆ ಆಗಿದ್ದು, ಇದರಿಂದ ವಿದ್ಯಾರ್ಥಿನಿಯರಿಗೆ ಧೈರ್ಯ, ಆತ್ಮವಿಶ್ವಾಸ ಹಾಗೂ ಸುರಕ್ಷತೆಯ ಭಾವನೆ ಹೆಚ್ಚುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕರಾಟೆ ಶಿಕ್ಷಕರ ನೇಮಕಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ದೇವರಾಜ್ ಸುರಪುರ ತಿಳಿಸಿದ್ದಾರೆ.
ವರದಿ: ಜೆಟ್ಟೆಪ್ಪ ಎಸ್. ಪೂಜಾರಿ
