ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ : ಶಾಲೆಗಳಲ್ಲಿ ನೋಡಲ್ ಅಧಿಕಾರಿಗಳ ನೇಮಕ..!
ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ : ಶಾಲೆಗಳಲ್ಲಿ ನೋಡಲ್ ಅಧಿಕಾರಿಗಳ ನೇಮಕ..!
ಕಲಬುರಗಿ:ಜಿಲ್ಲೆಯಲ್ಲಿನ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ದಿನಾಂಕ 06-04-2026 ರಂದು ಮಾನ್ಯ ಅಪರ ಜಿಲ್ಲಾಧಿಕಾರಿಗಳು ಕಲಬುರಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ, ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬೀದಿ ನಾಯಿಗಳ ಹಾವಳಿ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು ಶಾಲೆಯಲ್ಲೂ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.
ಇದರ ಜೊತೆಗೆ ಪ್ರತಿಯೊಂದು ಶಾಲೆಯ ಮುಖ್ಯೋಪಾಧ್ಯಾಯರನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿ, ಅವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಫಲಕವನ್ನು ಶಾಲೆಯ ಮುಂಭಾಗದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಗಿದೆ.
ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಕಲಬುರಗಿರವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿನ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
