2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಳು ಪ್ರಕಟ

2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಳು ಪ್ರಕಟ

2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಳು ಪ್ರಕಟ

ಬೆಂಗಳೂರು: 2026-27ನೇ ಸಾಲಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ ಕಾರ್ಯದರ್ಶಿಗಳು ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ.

ಸರ್ಕಾರವು ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸುವ ಉದ್ದೇಶದಿಂದ ಈ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. 2026-27ನೇ ಸಾಲಿನ ವರ್ಗಾವಣೆಗಾಗಿ ವಿಶೇಷ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ನೌಕರರ ಸೇವಾ ಅವಧಿ, ಹುದ್ದೆ, ಅಗತ್ಯತೆ ಹಾಗೂ ಆಡಳಿತಾತ್ಮಕ ಅವಶ್ಯಕತೆಗಳನ್ನು ಪರಿಗಣಿಸಿ ವರ್ಗಾವಣೆ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಆದರೆ, ಈಗಾಗಲೇ ಪ್ರತ್ಯೇಕ ಅಧಿನಿಯಮ ಅಥವಾ ನಿಯಮಾವಳಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ವರ್ಗದ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಮಾರ್ಗಸೂಚಿಗಳ ಮೂಲಕ ವರ್ಗಾವಣೆ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬವನ್ನು ತಪ್ಪಿಸಿ, ನ್ಯಾಯಸಮ್ಮತ ವ್ಯವಸ್ಥೆ ಸ್ಥಾಪಿಸುವತ್ತ ಸರ್ಕಾರ ಹೆಜ್ಜೆ ಇಟ್ಟಿದೆ.

ಪೂರ್ತಿ ಆದೇಶವನ್ನು ನೋಡಲು ಕೆಳಗೆ ಪಿಡಿಎಫ್ ಲಿಂಕ್ ಓಪನ್ ಮಾಡಿ ನೋಡಿ.

Files