ನಾಳೆ ದತ್ತಿ ಉಪನ್ಯಾಸ
ನಾಳೆ ದತ್ತಿ ಉಪನ್ಯಾಸ
ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ದಿ. ವಿಠ್ಠಲರಾವ ಕುಲಕರ್ಣಿ ತಲೇಖಾನ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 18.4. 2026ರಂದು ಬೆಳಿಗ್ಗೆ 12 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ನೂತನ ವಿದ್ಯಾಲಯ ಮಹಾವಿದ್ಯಾಲಯದ ನಿರ್ದೇಶಕರಾದ ಪ್ರೊ.ಗೋವಿಂದ ಪೂಜಾರ ಅವರು ಉದ್ಘಾಟಿಸಲಿದ್ದು ಸಹಾಯಕ ಪ್ರಾಧ್ಯಾಪಕರಾದ ಶ್ರೀಶೈಲ ಮದಾಣಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ನೀಡಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಅಪ್ಪಾರಾವ ಅಕ್ಕೋಣೆಯವರು ವಹಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ.ದಯಾನಂದ ಎಂ.ಶಾಸ್ತ್ರಿ ಹಾಗೂ ಕನ್ನಡ ಉಪನ್ಯಾಸಕರಾದ ಡಾ. ಮಲ್ಲಿನಾಥ ತಳವಾರ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಸಂಚಾಲಕರಾದ ಡಾ. ಶರಣಬಸಪ್ಪ ವಡ್ಡನಕೇರಿಯವರು ಹಾಗೂ ದತ್ತಿ ದಾನಿಗಳು ಹಾಗೂ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಉಪಾಧ್ಯಕ್ಷರಾದ ಡಾ. ಸ್ವಾಮಿರಾವ ಮತ್ತು ರಂಗಕರ್ಮಿ ಶ್ರೀ ನಾರಾಯಣ ಕುಲಕರ್ಣಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
