ಬಸವಣ್ಣನವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ : ಶಾಸಕ ಪ್ರಭು ಚವ್ಹಾಣ
ಬಸವಣ್ಣನವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ : ಶಾಸಕ ಪ್ರಭು ಚವ್ಹಾಣ
ಅಸಮಾನತೆ, ಅಂಧಶ್ರದ್ಧೆ ಹಾಗೂ ಸಾಮಾಜಿಕ ಅನ್ಯಾಯಗಳನ್ನು ನಿರ್ಮೂಲನೆ ಮಾಡಲು ಜೀವನದುದ್ದಕ್ಕೂ ಶ್ರಮಿಸಿದ್ದ ವಿಶ್ವಗುರು ಬಸವಣ್ಣನವರು ನೀಡಿದ ಕಾಯಕ ಸಿದ್ದಾಂತ ಸೇರಿದಂತೆ ಎಲ್ಲ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.
ತಾಲ್ಲೂಕು ಆಡಳಿತದ ವತಿಯಿಂದ ಔರಾದ(ಬಿ) ತಹಸೀಲ್ ಕಛೇರಿ ಆವರಣದಲ್ಲಿ ಏಪ್ರಿಲ್ 20 ರಂದು ಆಯೋಜಿಸಲಾದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾತಿ-ಮತ ಭೇದಗಳನ್ನು ದೂರ ಮಾಡಿ ಸಮಾನತೆಯ ನೆಲೆಯಲ್ಲಿ ಬದುಕುವ ಸಂದೇಶವನ್ನು ಬಸವಣ್ಣನವರು ನೀಡಿದ್ದಾರೆ. ಅವರು ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸುವ ಮೂಲಕ ಸಾಮಾಜಿಕ ಸಮಸ್ಯೆಗಳ ಬಗ್ಗೆ ತಿಳುವಳಿಕೆ ಮೂಡಿಸುವ ಜೊತೆಗೆ ಸಾಮಾಜದಲ್ಲಿರುವ ಅಂಕುಡೊAಕುಗಳನ್ನು ಸರಿಪಡಿಸಲು ತನ್ನದೇ ಆದ ಕೊಡುಗೆ ನೀಡಿದ್ದರು. ಬಸವಣ್ಣನವರ ವಚನಗಳು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ದಾರಿದೀಪವಾಗಿದ್ದು, ಇವುಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪವು ಜಗತ್ತಿನ ಮೊದಲ ಪಾರ್ಲಿಮೆಂಟ್ ಆಗಿದೆ. ಅಲ್ಲಿ ಎಲ್ಲ ವರ್ಗದ ಜನರಿಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡಲಾಗುತ್ತಿತ್ತು. ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಿದ ಮಹಾನ್ ಸಮಾಜ ಸುಧಾರಕರಾಗಿ ಬಸವಣ್ಣನವರು ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಬಸವಣ್ಣನವರು ಜಗತ್ತಿಗೆ ಪಾರ್ಲಿಮೆಂಟ್ ಪರಿಕಲ್ಪನೆಯನ್ನು ನೀಡಿದ ಮಹಾನ್ ವ್ಯಕ್ತಿ. ಅವರ ಚಿಂತನೆಗಳನ್ನು ವಿಶ್ವದ ಮಟ್ಟದಲ್ಲಿ ಪಸರಿಸಬೇಕೆಂಬ ಉದ್ದೇಶದಿಂದ ತಾವು ಸಚಿವರಾಗಿದ್ದಾಗ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆ. ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಯೋಜನೆಗೆ ಒಪ್ಪಿಗೆ ನೀಡಿದಷ್ಟೇ ಅಲ್ಲದೆ ಅವಶ್ಯಕ ಅನುದಾನ ನೀಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು ಎಂದು ತಿಳಿಸಿದರು.
ಹೈದ್ರಾಬಾದ ಕರ್ನಾಟಕವೆಂದು ಕರೆಸಿಕೊಳ್ಳುತ್ತಿದ್ದ ಈ ಭಾಗವನ್ನು ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿರುವುದು, ಬೀದರ ಜಿಲ್ಲಾ ರಂಗಮAದಿರಕ್ಕೆ ಚನ್ನಬಸವ ಪಟ್ಟದೇವರು ರಂಗಮAದಿರವೆAದು ನಾಮಕರಣ ಮಾಡಿರುವುದು ನನ್ನ ಸೌಭಾಗ್ಯ. ಮುಂದಿನ ದಿನಗಳಲ್ಲಿ ಬಸವಣ್ಣನವರ ನಾಡು ಅಂತಾರಾಷ್ಟಿçÃಯ ಪ್ರವಾಸಿ ತಾಣವಾಗುವತ್ತ ಸಾಗುತ್ತಿರುವುದಕ್ಕೆ ಬಹಳಷ್ಟು ಸಂತೋಷವಾಗುತ್ತದೆ ಎಂದರು.
ಹಂದಿಗುAದ ಸಿದ್ದೇಶ್ವರ ಮಠದ ಪೂಜ್ಯ ಶಿವಾನಂದ ಮಹಾಸ್ವಾಮಿಗಳು ವಿಶೇಷ ಉಪನ್ಯಾಸ ನೀಡಿ, ಬಸವಣ್ಣನವರನ್ನು ಪೂಜೆ ಮಾಡಿ ದೇವರನ್ನಾಗಿ ಮಾಡುವುದು ಬೇಕಾಗಿಲ್ಲ. ಅವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಮತ್ತು ನಾಡಿನಲ್ಲಿ ಶಾಂತಿ, ಸಮೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಆರಕ್ಷಕ ವೃತ್ತ ನಿರೀಕ್ಷಕರಾದ ರಘುವೀರಸಿಂಗ್ ಠಾಕೂರ, ಪುರಸಭೆ ಮುಖ್ಯಾಧಿಕಾರಿ ರವಿ ಸುಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ, ತಾಲ್ಲೂಕು ಆರೋಗ್ಯಾಧಿಕಾರಿ ಅನೀಲಕುಮಾರ, ಲೋಕೋಪಯೋಗಿ ಇಲಾಖೆ ಎಇಇ ಪ್ರೇಮಸಾಗರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಉತ್ತಮ ಸಂಘನಾಯಕ ಸೇರಿದಂತೆ ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯತ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ನಿರೂಪಿಸಿ ವಂದಿಸಿದರು.
*ಶಾಸಕರ ಕಛೇರಿಯಲ್ಲಿ ಜಯಂತಿ:* ಶಾಸಕರ ಕಚೇರಿಯಲ್ಲಿ ನಡೆದ ಬಸವಣ್ಣನವರ ಜಯಂತಿಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಚವ್ಹಾಣ, ಶಿವಾಜಿರಾವ ಪಾಟೀಲ ಮುಂಗನಾಳ, ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಪ್ರಕಾಶ ಅಲ್ಮಾಜೆ, ಖಂಡೋಬಾ ಕಂಗಟೆ, ನಾರಾಯಣ ಮೂಳೆ, ಬಸವರಾಜ ಹಳ್ಳೆ, ಸಿದ್ರಾಮಪ್ಪ ನಿಡೋದೆ, ಅಶೋಕ ಶಂಬೆಳ್ಳಿ, ಬಂಟಿ ರಾಂಪೂರೆ, ಬಾಲಾಜಿ ವಾಗ್ಮಾರೆ, ಮಹೇಶ ಭಾಲ್ಕೆ, ಸಂದೀಪ ಪಾಟೀಲ, ಶ್ರೀನಿವಾಸ ಖೂಬಾ, ರಮೇಶ ಗೌಡಾ, ಪ್ರಕಾಶ ಭಂಗಾರೆ, ಸಂಜು ಮಾನಕಾರೆ, ವೀರಶೆಟ್ಟಿ ಅಲ್ಮಾಜೆ, ಸಂತೋಷ ಜೊನ್ನಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
