ಬಸವ ಜಯಂತಿ ನಿಮಿತ್ತ ಬಸವೇಶ್ವರ ಆಸ್ಪತ್ರೆಯ ವತಿಯಿಂದ ರಕ್ತದಾನ ಶಿಬಿರ

ಬಸವ ಜಯಂತಿ ನಿಮಿತ್ತ ಬಸವೇಶ್ವರ ಆಸ್ಪತ್ರೆಯ ವತಿಯಿಂದ ರಕ್ತದಾನ ಶಿಬಿರ

ಬಸವ ಜಯಂತಿ ನಿಮಿತ್ತ ಬಸವೇಶ್ವರ ಆಸ್ಪತ್ರೆಯ ವತಿಯಿಂದ ರಕ್ತದಾನ ಶಿಬಿರ

ಕಲಬುರ್ಗಿ: ಬಸವ ಜಯಂತಿಯ 893ನೇ ಆಚರಣೆಯ ಅಂಗವಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ ಅವರ ನೇತೃತ್ವದಲ್ಲಿ ನಗರದ ಜಗತ್ ಸರ್ಕಲ್ ಹತ್ತಿರ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ಶಿಬಿರವನ್ನು ಎಚ್‌ಕೆಇ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ನಮೋಶಿ ಅವರು ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಆಳಂದ ಕ್ಷೇತ್ರದ ಶಾಸಕರಾದ ಶ್ರೀ ಬಿ. ಆರ್. ಪಾಟೀಲ್, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಅಲ್ಲಮಪ್ರಭು ಪಾಟೀಲ್ ಹಾಗೂ , ಉಪಸ್ಥಿತರಿದ್ದರು.

ಈ ಶಿಬಿರದ ಯಶಸ್ಸಿಗೆ ಬಸವೇಶ್ವರ ಆಸ್ಪತ್ರೆಯ ರಕ್ತ ಬ್ಯಾಂಕ್ ಅಧಿಕಾರಿ ಡಾ. ಮೀನಾಕ್ಷಿ ನಿಗ್ಗುಡಗಿ, ಆಸ್ಪತ್ರೆಯ ಸಾರ್ವಜನಿಕ ಆರೋಗ್ಯ ಅಧಿಕಾರಿ ಡಾ. ಸಂತೋಷ ನಾಗಲಾಪುರ ಹಾಗೂ ರಕ್ತ ಬ್ಯಾಂಕ್‌ನ ಸಂಪೂರ್ಣ ತಂಡದ ಶ್ರಮ ಮಹತ್ವದ ಪಾತ್ರ ವಹಿಸಿತು. ಅವರ ನಿಷ್ಠೆ ಮತ್ತು ಸಮನ್ವಯಿತ ಕಾರ್ಯದಿಂದ ಈ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು