ಪೂಜ್ಯ ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ: ಶಾಸಕ ಪ್ರಭು ಚವ್ಹಾಣ ಶುಭಾಶಯ

ಪೂಜ್ಯ ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ: ಶಾಸಕ ಪ್ರಭು ಚವ್ಹಾಣ ಶುಭಾಶಯ

ಪೂಜ್ಯ ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ: ಶಾಸಕ ಪ್ರಭು ಚವ್ಹಾಣ ಶುಭಾಶಯ

ಕಮಲನಗರ: ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷರು, ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ನಾಡೋಜ ಡಾ.ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವದ ಅಂಗವಾಗಿ ಮಾಜಿ ಸಚಿವರು ಹಾಗೂ ಔರಾದ್(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಏಪ್ರಿಲ್ 21ರಂದು ಪೂಜ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಶುಭಾಶಯಗಳನ್ನು ಸಲ್ಲಿಸಿದರು.

ಅಪ್ಪಟ ಬಸವಾನುಯಾಯಿಯಾದ ಪೂಜ್ಯ ಡಾ.ಬಸವಲಿಂಗ ಪಟ್ಟದೇವರು ತಮ್ಮ ಜೀವನವನ್ನೇ ಬಸವ ತತ್ವಗಳ ಪ್ರಸಾರ ಹಾಗೂ ಅನುಷ್ಠಾನಕ್ಕೆ ಸಮರ್ಪಿಸಿಕೊಂಡಿದ್ದಾರೆ. ಬಸವಣ್ಣನವರ ಸಮಾನತೆ, ಸೇವಾ ಮನೋಭಾವ, ದಾಸೋಹ ಮತ್ತು ಶರಣ ಸಂಸ್ಕೃತಿಯ ಮೌಲ್ಯಗಳನ್ನು ನಾಡಿನಾದ್ಯಂತ ಪಸರಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಬಡವರು, ನಿರ್ಗತಿಕರು ಮತ್ತು ಅನಾಥ ಮಕ್ಕಳಿಗೆ ಆಶ್ರಯದಾತರಾಗಿ ಅಸಂಖ್ಯಾತ ಮಕ್ಕಳನ್ನು ದತ್ತು ಪಡೆದು ಅವರ ಶಿಕ್ಷಣ, ಸಂಸ್ಕಾರ ಹಾಗೂ ಭವಿಷ್ಯ ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಅಕ್ಷರ ದಾಸೋಹ ಮತ್ತು ಅನ್ನ ದಾಸೋಹವನ್ನು ಸಮನ್ವಯಗೊಳಿಸಿ ಮಾನವೀಯ ಸೇವೆಯ ಸಾರ್ಥಕತೆಯನ್ನು ತೋರಿಸುತ್ತಿರುವ ಶ್ರೀಗಳು, ಶಿಕ್ಷಣ ಮತ್ತು ಸಮಾಜದ ಬಲವರ್ಧನೆಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ಅನೇಕ ಶೈಕ್ಷಣಿಕ ಹಾಗೂ ಧಾರ್ಮಿಕ ಚಟುವಟಿಕೆಗಳ ಮೂಲಕ ಯುವಜನತೆಯನ್ನು ಸನ್ಮಾರ್ಗದತ್ತ ಕೊಂಡೊಯ್ಯಲು ಮಾಡುತ್ತಿರುವ ಸೇವೆ ಅನನ್ಯ ಎಂದು ಸೇವೆಯನ್ನು ಕೊಂಡಾಡಿದ್ದಾರೆ.

ಕರ್ನಾಟಕ ಮಠಾಧೀಶರ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪೂಜ್ಯರು, ಅಧ್ಯಾತ್ಮಿಕ ಗುರುಗಳಾಗಿ ಬೀದರ ಜಿಲ್ಲೆಯ ಕೀರ್ತಿಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳಗಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಸಮಾಜದ ಏಕತೆ ಮತ್ತು ಸೌಹಾರ್ದತೆಗೆ ಬಲ ನೀಡುತ್ತಿದೆ.

ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಉಪರಾಷ್ಟçಪತಿಗಳು, ರಾಜ್ಯಪಾಲರು ಸೇರಿದಂತೆ ರಾಷ್ಟç ಮತ್ತು ಅಂತಾರಾಷ್ಟಿçÃಯ ಮಟ್ಟದ ಪ್ರಮುಖರು, ಧರ್ಮಗುರುಗಳು ಆಗಮಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಪೂಜ್ಯ ಡಾ.ಬಸವಲಿಂಗ ಪಟ್ಟದೇವರ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತಾರವಾಗಲಿ. ಅವರಿಗೆ ಇನ್ನಷ್ಟು ಶಕ್ತಿ, ಆರೋಗ್ಯ ಹಾಗೂ ದೀರ್ಘಾಯುಷ್ಯ ಲಭಿಸಿ ಶತಮಾನೋತ್ಸವವನ್ನು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿAದ ಆಚರಿಸುವಂತಾಗಲಿ ಎಂದು ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಶುಭ ಕೋರಿದ್ದಾರೆ. 

ಈ ಸಂದರ್ಭದಲ್ಲಿ ಪೂಜ್ಯ ಗುರುಬಸವ ಪಟ್ಟದೇವರು, ಮುಖಂಡರಾದ ಬಾಬು ವಾಲಿ, ರಾಮಶೆಟ್ಟಿ ಪನ್ನಾಳೆ, ಶಿವಾನಂದ ವಡ್ಡೆ, ಶಿವರಾಜ ಅಲ್ಮಾಜೆ, ಪ್ರತೀಕ ಚವ್ಹಾಣ, ಪ್ರವೀಣ ಕಾರಬಾರಿ, ಮಹಾದೇವ ಮಾಳಕಾರಿ, ಉದಯ ಸೋಲಾಪೂರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.