ಎಸ್.ಎಸ್.ಎಲ್.ಸಿ ಪರೀಕ್ಷೆ-1 ಫಲಿತಾಂಶ ಇಂದು ಪ್ರಕಟ

ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ-1 ಫಲಿತಾಂಶ ಇಂದು ಪ್ರಕಟ

ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ದಿನಾಂಕ 23-04-2026 ರಂದು ಮಧ್ಯಾಹ್ನ 12.00 ಗಂಟೆಗೆ ಪ್ರಕಟಿಸಲಾಗುವುದು ಎಂದು ಮಂಡಲಿ ಅಧ್ಯಕ್ಷರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು [https://karresults.nic.in](https://karresults.nic.in) ವೆಬ್‌ಸೈಟ್ ಹಾಗೂ KarnatakaOne ಮೊಬೈಲ್ ಆಪ್ ಮೂಲಕ ಪರಿಶೀಲಿಸಬಹುದಾಗಿದೆ. ಜೊತೆಗೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ಕಳುಹಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿಶೇಷ ವ್ಯವಸ್ಥೆಯಾಗಿ, ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್ (DigiLocker) ಮೂಲಕವೂ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12.00 ಗಂಟೆಯಿಂದ [https://www.digilocker.gov.in](https://www.digilocker.gov.in) ವೆಬ್‌ಸೈಟ್‌ನಲ್ಲಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಡಿಜಿಲಾಕರ್‌ನಿಂದ ಅಂಕಪಟ್ಟಿ ಪಡೆಯುವ ವಿಧಾನವನ್ನು ತಿಳಿದುಕೊಳ್ಳಲು [https://tinyurl.com/mw84wmh9](https://tinyurl.com/mw84wmh9) ಲಿಂಕ್‌ನಲ್ಲಿರುವ ವಿಡಿಯೋ ಸಹಾಯವಾಗುತ್ತದೆ.

ಅದೇ ವೇಳೆ, ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಕೂಡ ಮಧ್ಯಾಹ್ನ 12.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಮಂಡಲಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.