ಮಳೆಯ ಪರಿಣಾಮ: ‘ಭಾವೈಕ್ಯತೆಯ ಕನ್ನಡಿಗರ ಉತ್ಸವ’ ಕಾರ್ಯಕ್ರಮ ಮುಂದೂಡಿಕೆ
ಮಳೆಯ ಪರಿಣಾಮ: ‘ಭಾವೈಕ್ಯತೆಯ ಕನ್ನಡಿಗರ ಉತ್ಸವ’ ಕಾರ್ಯಕ್ರಮ ಮುಂದೂಡಿಕೆ
ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಘಟಕದ ವತಿಯಿಂದ ಏಪ್ರಿಲ್ 25, 2026 ರಂದು ಸಂಜೆ 5:30ಕ್ಕೆ ನಗರದ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಭಾವೈಕ್ಯತೆಯ ಕನ್ನಡಿಗರ ಉತ್ಸವ’ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಜಿಲ್ಲೆಯಾದ್ಯಂತ ಕಳೆದ 3-4 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಪಾಟೀಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬಿಗ್‌ಬಾಸ್ ವಿಜೇತ ಗಿಲ್ಲಿನಟ ಸೇರಿದಂತೆ ಜೀ ಕನ್ನಡ ವಾಹಿನಿಯ ಕಲಾವಿದರು ಭಾಗವಹಿಸುವುದಾಗಿ ನಿರೀಕ್ಷಿಸಲಾಗಿತ್ತು. ಆದರೆ ಹವಾಮಾನ ವೈಪರಿತ್ಯದ ಕಾರಣದಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿಗದಿಪಡಿಸಿ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದರಿಂದ ಕಾರ್ಯಕ್ರಮಕ್ಕಾಗಿ ಕಾದಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಶೆಯಾದರೂ, ಮುಂದಿನ ದಿನಾಂಕದಲ್ಲಿ ಇನ್ನಷ್ಟು ವೈಭವವಾಗಿ ಕಾರ್ಯಕ್ರಮ ನಡೆಯಲಿದೆ ಎಂಬ ವಿಶ್ವಾಸವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.
