ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಮಹಾಗಾಂವ್‌ಗೆ ಶತಪ್ರತಿಶತ ಫಲಿತಾಂಶ
ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಮಹಾಗಾಂವ್‌ಗೆ ಶತಪ್ರತಿಶತ ಫಲಿತಾಂಶ
ಕಲಬುರಗಿ: ಸಮಾಜ ಕಲ್ಯಾಣ ಇಲಾಖೆ ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ದಡಿ ಕಾರ್ಯನಿರ್ವಹಿಸುತ್ತಿರುವ ತಾ. ಕಮಲಾಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, ಮಹಾಗಾಂವ್‌ನಲ್ಲಿ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಶತಪ್ರತಿಶತ ಫಲಿತಾಂಶ ದಾಖಲಾಗಿದೆ. ಒಟ್ಟು 43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಫಲಿತಾಂಶದ ವಿವರದಲ್ಲಿ 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್, 7 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಹಾಗೂ 5 ವಿದ್ಯಾರ್ಥಿಗಳು ಪಾಸ್ ಕ್ಲಾಸ್‌ನಲ್ಲಿ ಉತ್ತೀರ್ಣರಾಗಿದ್ದಾರೆ. 92 ಶೇಕಡಾ ಅಂಕಗಳೊಂದಿಗೆ ನಂದಿನಿ/ಶುಭಾಶ ಅವರು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಸಂತೋಷಕುಮಾರ ಪಾಟೀಲ್, ಅಶೋಕ ಕೋಟೆ ಹಾಗೂ ಎಲ್ಲಾ ಶಿಕ್ಷಕ-ಸಿಬ್ಬಂದಿ ಸಂತೋಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಪ್ರಶಂಸಿಸಿದ್ದಾರೆ.
