ಕೆವಿಎಸ್‌ಆರ್ ಪ್ರೌಢಶಾಲೆಗೆ ಶತ ಪ್ರತಿಶತ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕೀರ್ತಿ
ಕೆವಿಎಸ್‌ಆರ್ ಪ್ರೌಢಶಾಲೆಗೆ ಶತ ಪ್ರತಿಶತ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕೀರ್ತಿ
ಗದಗ: ಜಿಲ್ಲೆಯ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಕನಕದಾಸ ಶಿಕ್ಷಣ ಸಂಸ್ಥೆಯ ಕೆವಿಎಸ್‌ಆರ್ ಪ್ರೌಢಶಾಲೆ, ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶತ ಪ್ರತಿಶತ ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮೆರೆದಿದೆ. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ಈ ಅಪೂರ್ವ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಬಿ.ಎಫ್. ದಂಡಿನ ಅವರು ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, “ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಹಾಗೂ ಪೋಷಕರ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ. ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಉನ್ನತ ಸಾಧನೆ ಮಾಡಲು ಇದು ಪ್ರೇರಣೆಯಾಗಲಿ,” ಎಂದು ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಗುಣಮಟ್ಟದ ಶಿಕ್ಷಣದ ಫಲವಾಗಿ ಈ ಶೇಕಡಾ ನೂರು ಫಲಿತಾಂಶ ಲಭಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶಾಲೆಯ ಈ ಸಾಧನೆ ಗದಗ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಕನಕದಾಸ ಶಿಕ್ಷಣ ಸಂಸ್ಥೆಯ ಶಿಕ್ಷಣ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ವರದಿ: ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ, ಕಲ್ಯಾಣ ಕಹಳೆ, ಗದಗ
