ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ವಾಲಿಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ವಾಲಿಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ವಾಲಿಬಾಲ್ ತಂಡವು ಬಳ್ಳಾರಿಯ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ನಡೆದ ಕಲಬುರ್ಗಿ ವಲಯ ಮಟ್ಟದ ಪುರುಷರ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಆಯ್ಕೆಯಾಗಿದ್ದಾರೆ. ದಿನಾಂಕ ಮೇ 8 ರಂದು ತುಮಕೂರಿನ ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆವರಣದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಆಡಲಿದ್ದಾರೆ. ಈ ಸಾಧನೆ ಮಾಡಿದ ಕಾಲೇಜಿನ ವಾಲಿಬಾಲ್ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ,ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಚಾರ್ಯರಾದ ಡಾ ಸಿದ್ಧರಾಮ ಪಾಟೀಲ್,ಡಾ ಎಸ್ ಆರ್ ಹೊಟ್ಟೆ ಉಪ ಪ್ರಾಚಾರ್ಯರಾದ ಡಾ ಭಾರತಿ ಹರಸೂರ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾ ನಿರ್ದೇಶಕರಾದ ಶರಣಮ್ಮ ಕುಪ್ಪಿ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದ್ದಾರೆ
