ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಭರವಸೆ

ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಭರವಸೆ
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಶಾಲಾ ಹಾಗೂ ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿರುವ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಕೆಲವು ಮಕ್ಕಳು ಗಾಯಗೊಂಡಿರುವ ಸುದ್ಧಿ ಕೇಳಿ ಮನಸ್ಸಿಗೆ ನೋವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಮಕ್ಕಳು ಮಕ್ಕಳು ಬೇಗ ಗುಣಮುಖರಾಗಲಿ, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಮೃತ ಮಕ್ಕಳ ಆತ್ಮಕ್ಕೆ ಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.