ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ಆದೇಶ

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ಆದೇಶ
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ಆದೇಶ

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ಆದೇಶ

ಬೆಂಗಳೂರು: ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಹಲವು ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿವಿಧ ಹುದ್ದೆಗಳಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ ಹೀಗಿದೆ:

* ಡಾ. ಪಿ. ಶಿವರಾಜು ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಲಾಗಿದೆ.

* ಅನ್ನಪೂರ್ಣ ಕೆ ಅವರನ್ನು ಬೆಂಗಳೂರು ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

* ಶೋಭಾ ಬಿ ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ, ವಿಕಾಸಸೌಧದಲ್ಲಿ ನಿಯೋಜಿಸಲಾಗಿದೆ.

* ಡಾ. ವೆಂಕಟೇಶ್ ಮೂರ್ತಿ ವಿ ಅವರನ್ನು ವಿಧಾನಸೌಧದ ರಾಜ್ಯ ಶಿಷ್ಟಾಚಾರ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

* ಶ್ರೀ ರಾಮಚಂದ್ರ ಗಡದೆ ಅವರನ್ನು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಬೆಂಗಳೂರಿನ ಪ್ರಧಾನ ವ್ಯವಸ್ಥಾಪಕರು (ಆಡಳಿತ ಹಾಗೂ ಖಾತೆ) ಹುದ್ದೆಗೆ ವರ್ಗಾಯಿಸಲಾಗಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಈ ವರ್ಗಾವಣೆ ಆದೇಶಗಳು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಸಂಬಂಧಿತ ಅಧಿಕಾರಿಗಳು ಮುಂದಿನ ಆದೇಶದವರೆಗೆ ನೂತನ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ.