ಖೋಟ್ಟಿ ದಾಖಲಾತಿ ಸೃಷ್ಟಿಸಿ ಮೂವತ್ತು ಲಕ್ಷ ನುಂಗಿ ಹಾಕಿರುವ ನಿಂಗಮ್ಮ ಕಟ್ಟಿಮನಿ ಅವರ ಸದಸ್ಯತ್ವ ರದ್ದತಿಗೆ ಆಗ್ರಹ

ಖೋಟ್ಟಿ ದಾಖಲಾತಿ ಸೃಷ್ಟಿಸಿ ಮೂವತ್ತು ಲಕ್ಷ ನುಂಗಿ ಹಾಕಿರುವ  ನಿಂಗಮ್ಮ ಕಟ್ಟಿಮನಿ ಅವರ ಸದಸ್ಯತ್ವ ರದ್ದತಿಗೆ ಆಗ್ರಹ

ಖೋಟ್ಟಿ ದಾಖಲಾತಿ ಸೃಷ್ಟಿಸಿ ಮೂವತ್ತು ಲಕ್ಷ ನುಂಗಿ ಹಾಕಿರುವ ನಿಂಗಮ್ಮ ಕಟ್ಟಿಮನಿ ಅವರ ಸದಸ್ಯತ್ವ ರದ್ದತಿಗೆ ಆಗ್ರಹ 

ಕಲಬುರಗಿ: ಸೇಡಂ ಪಟ್ಟಣದ ಭವಾನಿ ನಗರದಲ್ಲಿರುವ ವಿಜಯಲಕ್ಷ್ಮಿ ವೃದ್ಧಾಶ್ರಮ ಹೆಸರಿನಲ್ಲಿ ಅಕ್ರಮವಾಗಿ ಸುಮಾರು ರೂ.೩೦ ಲಕ್ಷ ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಎಂದು ನವ ಕರ್ನಾಟಕ ಎಂಆರ್ ಡಬ್ಲು, ವಿಆರ್‌ಡಬ್ಲ್ಯು, ಯುಆರ್ ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಎದುರುಗಡೆ ಪ್ರತಿಭಟನೆ ನಡೆಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ವಿಜಯಲಕ್ಷ್ಮಿ ಗ್ರಾಮೀಣ ಅಭಿವೃದ್ಧಿ ಸ್ವಸಹಾಯ ಸಂಘ, ತಾರ್‌ಫೈಲ್, ಕಲಬುರಗಿ ಸಂಸ್ಥೆಯ ಅಡಿಯಲ್ಲಿ ವೃದ್ಧಾಶ್ರಮ ಕಾರ್ಯನಿರ್ವಹಿಸುತ್ತಿದೆ ಎಂದು ದಾಖಲೆಗಳನ್ನು ಸೃಷ್ಟಿಸಿ ೨೦೨೩-೨೪, ೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನಲ್ಲಿ ಒಟ್ಟು ರೂ.೩೦ ಲಕ್ಷ ಅನುದಾನ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಅವರು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವ ಬದಲು ಅಕ್ರಮ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ. ವೃದ್ಧಾಶ್ರಮ ಕಾರ್ಯನಿರ್ವಹಿಸುತ್ತಿರುವಂತೆ ತೋರಿಸಲು ಮಧ್ಯರಾತ್ರಿ ವೇಳೆ ವಯೋವೃದ್ಧರನ್ನು ಸ್ಥಳಕ್ಕೆ ಕರೆತಂದು ಊಟದ ವ್ಯವಸ್ಥೆ ಮಾಡಿರುವ ಆರೋಪವೂ ಕೇಳಿಬಂದಿದೆ.

ಇದಲ್ಲದೆ, ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ ೫೪ರ ಸದಸ್ಯೆ ನಿಂಗಮ್ಮ ಕಟ್ಟಿಮನಿ ಅವರು ಸಂಘದ ಅಧ್ಯಕ್ಷೆಯಾಗಿದ್ದು, ಅನುದಾನ ದುರ್ಬಳಕೆ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಿ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಲಾಗಿದೆ.

ಹಿರಿಯ ನಾಗರಿಕರ ಹೆಸರಿನಲ್ಲಿ ಅನುದಾನ ಪಡೆದು ಸೌಲಭ್ಯಗಳನ್ನು ನೀಡದೇ ಇರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಮುಖಂಡರು, ಸಂಬAಧಪಟ್ಟ ಎಲ್ಲರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಲಕ್ಷ್ಮಿಬಾಯಿ ಶರಣಪ್ಪ ಅವರು ಜನ್ಮ ದಿನಾಂಕ ತಿದ್ದುಪಡಿ ಮಾಡಿಕೊಂಡು ಸೇವೆಯಲ್ಲಿ ಮುಂದುವರಿದಿದ್ದಾರೆ ಎಂದು ಆರೋಪಿಸಿ, ಅವರ ವಯಸ್ಸು ದೃಢೀಕರಣಕ್ಕಾಗಿ ಮೂಳೆ ಸಾಂದ್ರತೆ ಪರೀಕ್ಷೆ , ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಒಂದುವೇಳೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

ಈ ಸಂದರ್ಭದಲ್ಲಿ ಮಹಾನಾಯಕ ಬ್ರಿಗೇಡ್ ರಾಜ್ಯಾಧ್ಯಕ್ಷ ಗುಂಡೇಶ ಎಂ. ಶಿವನೂರ, ತಾರ್‌ಫೈಲ್ ಬಡಾವಣೆ ಮುಖಂಡ ಉದಯಕುಮಾರ ಎಸ್. ಬೆಳಗುಂದಿ ಹಾಗೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷ ಅಂಬಾಜಿ ಪಿ. ಮೇಟಿ ಸೇರಿದಂತೆ ಇತರರು ಇದ್ದರು.