ಅಭಿವೃದ್ಧಿ ಮಾಡದಿದ್ದರೆ ಬಿಜೆಪಿ ನೇತೃತ್ವದಲ್ಲಿ ಹೋರಾಟ: ದೇವೇಂದ್ರ ದೇಸಾಯಿ ಕಲ್ಲೂರ್ ಎಚ್ಚರಿಕೆ

ಅಭಿವೃದ್ಧಿ ಮಾಡದಿದ್ದರೆ ಬಿಜೆಪಿ ನೇತೃತ್ವದಲ್ಲಿ ಹೋರಾಟ: ದೇವೇಂದ್ರ ದೇಸಾಯಿ ಕಲ್ಲೂರ್ ಎಚ್ಚರಿಕೆ

ಅಭಿವೃದ್ಧಿ ಮಾಡದಿದ್ದರೆ ಬಿಜೆಪಿ ನೇತೃತ್ವದಲ್ಲಿ ಹೋರಾಟ: ದೇವೇಂದ್ರ ದೇಸಾಯಿ ಕಲ್ಲೂರ್ ಎಚ್ಚರಿಕೆ

ಕಲಬುರಗಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿದೆ ಎಂದು ಬಿಜೆಪಿ ಒಬಿಸಿ ನಗರಾಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ್ ಆರೋಪಿಸಿದರು.

ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಅವರು, ಗುಲ್ಬರ್ಗ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ. ದಲಿತರು, ಹಿಂದೂಗಳು ಹಾಗೂ ವಿಶ್ವಕರ್ಮ ಸಮುದಾಯದ ವಿರುದ್ಧ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಖಂಡಿಸಿ ಜೂನ್ 10ರಂದು ಬೆಳಗ್ಗೆ 11 ಗಂಟೆಗೆ ತಿಮ್ಮಾಪುರಿ ಸರ್ಕಲ್‌ನಲ್ಲಿ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು “ಕುಂಭಕರ್ಣ ನಿದ್ದೆ”ಯಲ್ಲಿರುವಂತೆ ವೇಷ ಧರಿಸಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಲಾಗುವುದು ಎಂದು ಹೇಳಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಗರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿದ್ದು, ಜನರಿಗೆ ಮಂಕುಬೂದಿ ಎರಚುವ ಕೆಲಸ ನಡೆಯುತ್ತಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ, ಅಬಕಾರಿ ಹಗರಣ, ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರ ಸಿಲುಕಿಕೊಂಡಿದೆ ಎಂದು ಆರೋಪಿಸಿದರು.

ವಿರೋಧ ಪಕ್ಷಗಳು ಧ್ವನಿ ಎತ್ತಿದರೂ ಸರ್ಕಾರ ಅದನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಗುಲ್ಬರ್ಗ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ನೇತೃತ್ವದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ದೇವೇಂದ್ರ ದೇಸಾಯಿ ಕಲ್ಲೂರ್ ಎಚ್ಚರಿಸಿದರು.