ಡಾ. ಬಿ.ಆರ್. ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡಾಗಲೇ ವಿದ್ಯಾರ್ಥಿಗಳಿಗೆ ಯಶಸ್ಸು: ವಿದ್ಯಾಧರ್ ಆರ್. ಕಾಂಬಳೆ

ಡಾ. ಬಿ.ಆರ್. ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡಾಗಲೇ ವಿದ್ಯಾರ್ಥಿಗಳಿಗೆ ಯಶಸ್ಸು: ವಿದ್ಯಾಧರ್ ಆರ್. ಕಾಂಬಳೆ

ಡಾ. ಬಿ.ಆರ್. ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡಾಗಲೇ ವಿದ್ಯಾರ್ಥಿಗಳಿಗೆ ಯಶಸ್ಸು: ವಿದ್ಯಾಧರ್ ಆರ್. ಕಾಂಬಳೆ

ಕಲಬುರಗಿ: ಮಹಿಳೆಯರ ಮೀಸಲಾತಿ ಮತ್ತು ಶಿಕ್ಷಣ ಹಕ್ಕಿಗಾಗಿ ತಮ್ಮ ಮಂತ್ರಿ ಸ್ಥಾನವನ್ನೇ ತ್ಯಜಿಸಿದ ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ ಮತ್ತು ತತ್ವಗಳನ್ನು ಇಂದಿನ ವಿದ್ಯಾರ್ಥಿಗಳು ಆದರ್ಶವಾಗಿ ತೆಗೆದುಕೊಂಡು ಅಭ್ಯಾಸ ಮಾಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿದ್ಯಾಧರ್ ಆರ್. ಕಾಂಬಳೆ ಅಭಿಪ್ರಾಯಪಟ್ಟರು.

ಅವರು ಪಿಲ್ಲೂ ಹೋಮಿ ಇರಾನಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಾಠ್ಯಾಭ್ಯಾಸಕ್ಕೆ ಸೀಮಿತರಾಗದೇ, ಸಮಾಜಮುಖಿ ಚಿಂತನೆ, ಸಮಾನತೆ ಹಾಗೂ ಶಿಕ್ಷಣದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.

 ಪ್ರಾದೇಶಿಕ ಆಯುಕ್ತರ ಕಚೇರಿ ಕಲಬುರಗಿಯ ಲೆಕ್ಕಾಧಿಕಾರಿಗಳಾದ ಡಾ. ಅಂಬಿಕಾ ಕೆ.ಸಿ., ಕಾಲೇಜಿನ ಪ್ರಾಚಾರ್ಯರಾದ ಡಾ. ಜ್ಯೋತಿ ಎಂ. ಸ್ವಾಮಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಮಾನಂದ ಪಾಟೀಲ್ ಹಾಗೂ ಶ್ರೀಮತಿ ಜಗದೇವಿ ಎಸ್. ದಿಗ್ಗಾಂವ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಸಲ್ಲಿಸಲಾಯಿತು ಹಾಗೂ ಅವರ ಭವಿಷ್ಯದ ಉಜ್ವಲ ಜೀವನಕ್ಕಾಗಿ ಪ್ರೇರಣಾದಾಯಕ ಸಂದೇಶಗಳನ್ನು ನೀಡಲಾಯಿತು.