ಕಲಬುರಗಿಯಲ್ಲಿ ರೌಡಿ ಪರೇಡ್: ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ
ಕಲಬುರಗಿಯಲ್ಲಿ ರೌಡಿ ಪರೇಡ್: ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ
ಕಲಬುರಗಿ: ನಗರದ ಸಿಎಆರ್ ಪರೇಡ್ ಮೈದಾನದಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಅವರ ನೇತೃತ್ವದಲ್ಲಿ ರೌಡಿ ಪರೇಡ್ ಜರುಗಿತು. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆಯೋಜಿಸಲಾದ ಈ ಪರೇಡ್‌ನಲ್ಲಿ ವಿವಿಧ ಠಾಣೆಗಳ ರೌಡಿ ಶೀಟರ್‌ಗಳನ್ನು ಹಾಜರುಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು, ಸಮಾಜದ ಶಾಂತಿ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಸನ್ಮಾರ್ಗದಲ್ಲಿ ನಡೆಯುವಂತೆ ಸೂಚಿಸಿದರು.
ರೌಡಿ ಪರೇಡ್‌ನಲ್ಲಿ ಎಸಿಪಿ ಶಾಲೂ, ಡಿಸಿಪಿಗಳು ಸೇರಿದಂತೆ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
