ಸಮವಸ್ತ್ರ ನಿಯಮ ಹಿಂಪಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಸಮವಸ್ತ್ರ ನಿಯಮ ಹಿಂಪಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಕಲಬುರಗಿ: ರಾಜ್ಯದ ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಶಿಸ್ತು ಕಾಪಾಡುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿರುವುದನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಚಂದ್ರಕಾಂತ ಪಾಟೀಲ, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಸಂಸದ ಡಾ. ಉಮೇಶ ಜಾಧವ, ಪ್ರಮುಖರಾದ ಬಾಬುರಾವ ಚವ್ಹಾಣ, ಡಾ. ಇಂದಿರಾ ಶಕ್ತಿ, ಡಾ. ಸುಧಾ ಹಾಲಕಾಯಿ, ಗಿರಿರಾಜ ಯಳಮೇಲಿ, ಲಿಂಗರಾಜ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
